ಸ್ನೇಹಿತನ ರಕ್ಷಿಸಲು ಹೋದ ನಾಲ್ವರ ದುರ್ಮರಣ
ಧರ್ಮಪುರಿ: ನೀರಿನಲ್ಲಿ ಮುಳುಗುತ್ತಿದ್ದ ಸ್ನೇಹಿತನನ್ನು ರಕ್ಷಿಸಲು ಹೋಗಿ 4 ಮಂದಿ ಜಲಸಮಾಧಿಯಾಗಿರುವ ಧಾರುಣ ಘಟನೆ ಹೊಗೇನಕಲ್ನಲ್ಲಿ ಬುಧವಾರ ಸಂಭವಿಸಿದೆ.
ಪ್ರವಾಸಕ್ಕೆಂದು ಹೊಗೇನಕಲ್ಗೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತರು ಬೆಂಗಳೂರಿನ ಕೋರಮಂಗಲ ನಿವಾಸಿಗಳಾದ ನಂದ, ನಾಗೇಶ್, ರಾಜು, ವಿಜಯ್ ಎಂದು ತಿಳಿದುಬಂದಿದೆ. ಕೋರಮಂಗಲದ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು, ಇಂದು ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಂಪನಿಗೆ ರಜೆ ಇರುವುದರಿಂದ 14 ಜನರ ತಂಡ 7 ಬೈಕ್ನಲ್ಲಿ ಹೊಗೇನಕಲ್ಗೆ ತೆರಳಿದ್ದರು.
ಧರ್ಮಪುರಿ ಜಿಲ್ಲೆಯ ಹೊಗೇನೆಕಲ್ ಸಮೀಪದ ಹೊಳೆಯಲ್ಲಿ ಸ್ನಾನ ಮಾಡಲೆಂದು ಇಳಿದಿದ್ದಾರೆ. ಆ ಸಂದರ್ಭದಲ್ಲಿ ಜಗದೀಶ್ ಎಂಬುವರು ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗುತ್ತಿದ್ದುದನ್ನು ಗಮನಿಸಿದ ಸ್ನೇಹಿತರು, ಆತನನ್ನು ರಕ್ಷಿಸಲು ಮುಂದಾಗಿದ್ದಾರೆ. ಹೊಳೆಯಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದ್ದರಿಂದ 4 ಮಂದಿ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಜಗದೀಶ್ ಪ್ರಾಣಪಾಯದಿಂದ ಪಾರಾಗಿದ್ದಾನೆ.
ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು, ನೀರಿನಲ್ಲಿ ಮುಳುಗಿ ಅಸ್ವಸ್ಥಗೊಂಡಿದ್ದ ಜಗದೀಶ್ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರ ದೇಹಗಳನ್ನು ಹೊರಗೆ ತೆಗೆಯಲಾಗಿದ್ದು, ಹೊಗೇನಕಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

