ಕೇವಲ 41 ನಿಮಿಷದಲ್ಲಿ ಐಎಎಸ್ ದುರ್ಗಾಶಕ್ತಿ ಅಮಾನತು: ನರೇಂದ್ರ ಬಾಟಿ
ನೋಯ್ಡಾ: ಉತ್ತರ ಪ್ರದೇಶದ ಗೌತಮ ಬುದ್ದ ನಗರದ ಜಿಲ್ಲಾಧಿಕಾರಿ ದುರ್ಗಾಶಕ್ತಿ ನಾಗಪಾಲ್ ಅವರ ಅಮಾನತು ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ.
ಐಎಎಸ್ ಅಧಿಕಾರಿ ನಾಗಪಾಲ್ ಅವರನ್ನು ಕೇವಲ 41 ನಿಮಿಷದಲ್ಲಿ ಅಮಾನತುಗೊಳಿಸಲಾಗಿದೆ ಎಂದು ಉತ್ತರ ಪ್ರದೇಶ ಆಗ್ರೋ ಇಂಡಸ್ಟ್ರಿಯಲ್ ಕಾರ್ಪೋರೆಷನ್ ಸಂಸ್ಥೆಯ ಅಧ್ಯಕ್ಷ ನರೇಂದ್ರ ಬಾಟಿ ಹೇಳಿಕೆಯ ವೀಡಿಯೊ ಇದೀಗ ವಿವಾದಕ್ಕೆ ಕಾರಣವಾಗಿದೆ.
ಐಪಿಎಸ್ ಅಧಿಕಾರಿಯನ್ನು ಅಮಾನತುಗೊಳಿಸಿದ ಕ್ರಮವನ್ನು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸಮರ್ಥಿಸಿಕೊಂಡು, ಅಮಾನತು ವಾಪಸ್ ಇಲ್ಲ ಎಂದು ಹೇಳಿದ ಬೆನ್ನಲ್ಲೇ ಈ ವೀಡಿಯೊ ಕಾಣಿಸಿಕೊಂಡಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಬಾಟಿ ಅವರು, ನೋಯ್ಡಾದಲ್ಲಿ ನಡೆದ ಸಭೆಯೊಂದರಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ನಾಗಪಾಲ್ ಅವರ ಅಮಾನತು ಆದೇಶದ ಕೇವಲ 41 ನಿಮಿಷಗಳಲ್ಲಿ ಸಿದ್ಧವಾಯಿತು ಎಂದು ಬಡಾಯಿಕೊಚ್ಚಿಕೊಂಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
ಇದೇ ವೇಳೆ, ನಾನು ಎಸ್‌ಪಿ ಮುಖ್ಯಸ್ಧ ಮುಲಾಯಂ ಸಿಂಗ್ ಯಾದವ್ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರೊಂದಿಗೆ, ಆ ದಿನ ಬೆಳಿಗ್ಗೆ 10.30 ರ ಸುಮಾರಿನಲ್ಲಿ ದೂರವಾಣಿ ಕರೆ ಮಾಡಿ ಮಾತನಾಡಿದ್ದೆ, ಇದಾಗಿ 41 ನಿಮಿಷಗಳಲ್ಲಿ ನಾಗಪಾಲ್ ಅಮಾನತ್ತು ಆದೇಶ ಹೊರಬಿದ್ದಿತ್ತು ಎಂದು ಬಾಟಿ ಹೇಳಿದ್ದರು.
ಆ ನಂತರ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಮುಂದಾಗಿರುವ ಅವರು, ಪ್ರತಿಪಕ್ಷಗಳು ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ತಮ್ಮ ವಿರುದ್ಧ ಆರೋಪಿಸುತ್ತಿದ್ದಾರೆ. ಇದೊಂದು ರಾಜಕೀಯ ಪಿತೂರಿಯಾಗಿದೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಗೌತಮ ಬುದ್ಧ ನಗರ ವ್ಯಾಪ್ತಿಯಲ್ಲಿ ಅಕ್ರಮ ಮರಳು ಮಾಫಿಯಾ ವಿರುದ್ಧ ಕ್ರಮ ಕೈಗೊಂಡಿದ್ದ ಐಎಎಸ್ ಅಧಿಕಾರಿ ದುರ್ಗಾಶಕ್ಷಿ ನಾಗಪಾಲ್ ಅವರ ಮೇಲೆ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ಆರೋಪದ ಮೇಲೆ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಸರ್ಕಾರ ಜುಲೈ 27 ರಂದು ಅಮಾನತುಗೊಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

