ಈಗಿನ ಸುದ್ದಿ

ದುರ್ಗಾ ಅಮಾನತು: ಮಧ್ಯಸ್ಥಿಕೆಗೆ ಹೈಕೋರ್ಟ್ ನಕಾರ

Published On :

ಲಖನೌ: ಉತ್ತರ ಪ್ರದೇಶದ ಗೌತಮ ಬುದ್ಧ ನಗರದ ಐಎಎಸ್ ಅಧಿಕಾರಿ ದುರ್ಗಶಕ್ತಿ ನಾಗಪಾಲ್ ಅವರ ಅಮಾನತು ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಹೇಳಿದೆ.

ನಾಗಪಾಲ್ ಅವರನ್ನು ಅಮಾನತುಗೊಳಿಸಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದೇವಿಪ್ರಸಾದ್ ಸಿಂಗ್ ಮತ್ತು ಅಶೋಕ ಪಾಲ್ ಅವರನ್ನೊಳಗೊಂಡ ಪೀಠ, ಈ ಪ್ರಕರಣ ಸರ್ಕಾರ ಹಾಗೂ ಅಧಿಕಾರಿಯ ನಡುವಿನ ಸಮಸ್ಯೆಯಾಗಿದ್ದು. ಇದರಲ್ಲಿ ಮಧ್ಯಸ್ಥಿಕೆ ವಹಿಸುವುದು ಸೂಕ್ತವಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಗೌತಮ ಬುದ್ಧ ನಗರದ ಅಕ್ರಮ ಮರಳು ಮಾಫಿಯಾಗೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

ನಾಗಪಾಲ್ ಅವರ ಅಮಾನತಿನ ನಂತರ ಅಕ್ರಮ ಮರಳು ಮಾಫಿಯಾಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ದ ಎಷ್ಟು ಎಫ್‌ಐಆರ್‌ಗಳು ದಾಖಲಾಗಿವೆ, ಎಷ್ಟು ಸಾಮಗ್ರಿ ಸರಂಜಾಮುಗಳನ್ನು ವಶಪಡಿಸಿಕೊಳ್ಳಲಾಗಿದೆ, ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಎಷ್ಟು ಮಂದಿಯನ್ನು ಬಂಧಿಸಲಾಗಿದೆ ಎಂಬುದರ ಮಾಹಿತಿ ನೀಡುವಂತೆ 2010ರ ಬ್ಯಾಚ್‌ನ ಐಪಿಎಸ್ ಅಧಿಕಾರಿಗಳಿಗೆ ಸೂಚಿಸಿದೆ. ಅಲ್ಲದೆ ಮುಂದಿನ ವಿಚಾರಣೆಯನ್ನು ಈ ತಿಂಗಳ 19ಕ್ಕೆ ಮುಂದೂಡಿದೆ.

ಗೌತಮ ಬುದ್ಧ ನಗರದಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಮರಳು ಮಾಫಿಯಾವನ್ನು ಹತ್ತಿಕ್ಕಲು ನಾಗಪಾಲ್ ಮುಂದಾಗಿದ್ದರು. ನಾಗಪಾಲ್ ಅವರ ಈ ಕ್ರಮವನ್ನೇ ಮುಂದಿಟ್ಟುಕೊಂಡು ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಸರ್ಕಾರ ಜುಲೈ 27 ರಂದು ಅಮಾನತುಗೊಳಿಸಿತ್ತು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.