ರಾಜಕೀಯ ಪಕ್ಷಗಳು ಚು.ಆಯೋಗಕ್ಕೆ ಲೆಕ್ಕ ನೀಡುತ್ತವೆ: ಕೇಂದ್ರ

ನವದೆಹಲಿ: ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿ ತರುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ, ರಾಜಕೀಯ ಪಕ್ಷಗಳು 'ಸಾರ್ವಜನಿಕ ಸಂಸ್ಥೆಗಳಲ್ಲ', ಅವು ಜನರು ಸ್ವಇಚ್ಛೆಯಿಂದ ಸ್ಥಾಪಿಸಲ್ಪಟ್ಟ ಸಂಸ್ಥೆಗಳು ಎಂದು ಶುಕ್ರವಾರ ಸ್ಪಷ್ಟನೆ ನೀಡಿದೆ.
ರಾಜಕೀಯ ಪಕ್ಷಗಳನ್ನು ಮಾಹಿತಿ ಹಕ್ಕು ಕಾಯ್ದೆಯಿಂದ ಹೊರಗಿಡುವ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಕಾನೂನು ಸಚಿವ ಕಪಿಲ್ ಸಿಬಲ್ ಅವರು, ರಾಜಕೀಯ ಪಕ್ಷಗಳು 'ಸಾರ್ವಜನಿಕ ಸಂಸ್ಥೆಗಳಲ್ಲ', ಅವು ಜನರಿಂದ ಸ್ಥಾಪಿಸಲ್ಪಟ್ಟ ಸಂಸ್ಥೆಗಳು. ಜನ ಸ್ವಇಚ್ಛೆಯಿಂದ ರಾಜಕೀಯ ಪಕ್ಷವನ್ನು ಸೇರುತ್ತಾರೆ ಮತ್ತು ಬಿಟ್ಟು ಹೋಗುತ್ತಾರೆ. ಇಲ್ಲಿ ಯಾವುದೇ ಅಧಿಕಾರಿಗಳನ್ನು ನಾವು ನೇಮಕ ಮಾಡುವುದಿಲ್ಲ ಎಂದು ವರದಿಗಾರರಿಗೆ ತಿಳಿಸಿದರು.
ರಾಜಕೀಯ ಪಕ್ಷಗಳು ಜನಪ್ರತಿನಿಧಿ ಕಾಯ್ದೆ 1951ರಡಿ ನೋಂದಾಯಿಸಲ್ಪಟ್ಟಿರುತ್ತವೆ ಮತ್ತು ಸೆಕ್ಸನ್ 29(ಸಿ) ಪ್ರಕಾರ, ಎಲ್ಲ ರಾಜಕೀಯ ಪಕ್ಷಗಳು ತಾವು ಪಡೆದುಕೊಂಡ ದೇಣಿಗೆ ಮತ್ತು ಇತರೆ ಆಸ್ತಿ-ಪಾಸ್ತಿಯ ವಿವಗಳನ್ನು ಚುನಾವಣಾ ಆಯೋಗಕ್ಕೆ ನೀಡುತ್ತವೆ ಎಂದು ಸಚಿವರು ತಿಳಿಸಿದರು.
ನಿನ್ನೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿತ್ತು.
ಇತ್ತೀಚೆಗೆ ಕೇಂದ್ರ ಮಾಹಿತಿ ಆಯೋಗ ಆರು ರಾಷ್ಟ್ರೀಯ ರಾಜಕೀಯ ಪಕ್ಷಗಳು ಮಾಹಿತಿ ಹಕ್ಕಿನ ವ್ಯಾಪ್ತಿಯಲ್ಲಿ ಬರುತ್ತವೆ ಎಂದು ತೀರ್ಪು ನೀಡಿತ್ತು. ಪಕ್ಷಗಳು ಸಂಗ್ರಹಿಸುವ ದೇಣಿಗೆ ಮತ್ತು ಅವುಗಳ ಕಾರ್ಯವೈಖರಿಗಳ ಬಗ್ಗೆ ಸಾರ್ವಜನಿಕರು ಮಾಹಿತಿ ಕೋರಿ ಅರ್ಜಿ ಸಲ್ಲಿಸಿದಲ್ಲಿ ಮಾಹಿತಿ ನೀಡಲೇಬೇಕೆಂದು ಜೂ.3ರಂದು ಸೂಚಿಸಿತ್ತು. ಈ ಬಗ್ಗೆ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಎನ್ಸಿಪಿ, ಸಿಪಿಎಂ ಮತ್ತು ಬಿಎಸ್ಪಿ ಪ್ರಬಲ ವಿರೋಧ ವ್ಯಕ್ತಪಡಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


