ಸೆ, 11ರಿಂದ ಕೇದಾರನಾಥನಿಗೆ ಪೂಜೆ

ಡೆಹ್ರಾಡೂನ್: ಪ್ರವಾಹ ಹಾಗೂ ಭೂಕುಸಿತದಿಂದ ತೀವ್ರ ಹಾನಿಗೆ ಒಳಗಾಗಿದ್ದ, ಉತ್ತರಾಖಂಡದ ಕೇದಾರನಾಥ ದೇವಾಲಯದಲ್ಲಿ ಮತ್ತೆ ಪೂಜಾ ಕಾರ್ಯಗಳು ಸೆಪ್ಟೆಂಬರ್ 11 ರಿಂದ ನಡೆಯಲಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ವಿಜಯ್ ಬಹುಗುಣ ಶುಕ್ರವಾರ ತಿಳಿಸಿದ್ದಾರೆ.
ಕೇದಾರನಾಥ್ ದೇವಾಲಯದ ಸಮಿತಿಯೊಂದಿಗೆ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿದ ಬಳಿಕ ದಿನಾಂಕವನ್ನು ನಿರ್ಧರಿಸಲಾಗಿದೆ ಎಂದು ಬಹುಗುಣ ಅವರು ಹೇಳಿದ್ದಾರೆ.
ಜಲ ಪ್ರಳಯಕ್ಕೆ ಸಿಲುಕಿ ಶಿಥಿಲಗೊಂಡಿದ್ದ ಕೇದರಾನಾಥ್ ದೇವಸ್ಥಾನದ ಜೀರ್ಣೋದ್ಧಾರದ ಕಾರ್ಯವೇ ಸರ್ಕಾರಕ್ಕೆ ಒಂದು ದೊಡ್ಡ ಸವಾಲಾಗಿತ್ತು. ಆದರೆ ಸರ್ಕಾರದ ಹಲವು ಪರಿಹಾರ ತಂಡಗಳ ಸಹಕಾರದಿಂದ ಪುನರ್ ನಿರ್ಮಾಣಕಾರ್ಯ ಪ್ರಗತಿ ಸಾಧಿಸಲು ಸಾಧ್ಯವಾಯಿತು ಎಂದು ಉತ್ತರಾಖಂಡ ಸಿಎಂ ತಿಳಿಸಿದ್ದಾರೆ.
ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗಿದ್ದು, ಮುಂದಿನ ತಿಂಗಳಲ್ಲಿ ಮುಗಿಯುವ ಸಾಧ್ಯತೆ ಇದೆ. ಹೀಗಾಗಿ ದೇವಸ್ಥಾನದ ವಿಧಿವಿಧಾನಗಳಂತೆ ಸೆಪ್ಟೆಂಬರ್ 11ರಿಂದ ಎಂದಿನಂತೆ ಪೂಜಾ ಕಾರ್ಯಗಳು ನಡೆಯಲಿವೆ ಎಂದು ಅವರು ಹೇಳಿದ್ದಾರೆ.
ಎಎಸ್‌ಐ ಮತ್ತು ಜಿಎಸ್‌ಐನ ಪ್ರಮುಖ ಪರಿಣಿತರ ತಂಡ ದೇವಾಲಯದ ಜೀರ್ಣೋದ್ಧಾರ ಕಾರ್ಯನಿರ್ವಹಿಸುತ್ತಿದ್ದು, ರಸ್ತೆ ಹಾಗೂ ಮೂಲಸೌಕರ್ಯ ಕಲ್ಪಿಸುವ ಕಾರ್ಯವನ್ನು ಇಂಜಿನಿಯರಿಂಗ್ ಪ್ರಾಜೆಕ್ಟ್ ಇಂಡಿಯಾ ಸಂಸ್ಥೆಗೆ ವಹಿಸಲಾಗಿದೆ ಎಂದರು.
ಜೂನ್ 16 ರಂದು ಕೇದಾರನಾಥ ಸೇರಿದಂತೆ ಉತ್ತರಾಖಂಡದಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಸಾವಿರಾರು ಮಂದಿ ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


