ಈಗಿನ ಸುದ್ದಿ

ಅನಿತಾ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಅನಿತಾ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ
Published On :

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಹಾಗೂ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಬೆಂಗಳೂರು ಗ್ರಾಮಾಂತರ ಲೋಕಸಭೆ ಉಪ ಚುನಾವಣೆಗೆ ಶನಿವಾರ ನಾಮಪತ್ರ ಸಲ್ಲಿಸಿದರು.

ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಪ್ರತಿಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚೆನ್ನಪಟ್ಟಣದಿಂದ ಸ್ಪರ್ಧಿಸಿ ಸೋತಿದ್ದ ಅನಿತಾ ಕುಮಾರಸ್ವಾಮಿ ಅವರು ಈಗ ಲೋಕಸಭೆ ಕಣಕ್ಕಿಳಿದಿದ್ದಾರೆ. ಇನ್ನು ಕಾಂಗ್ರೆಸ್‌ನಿಂದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಅವರು ಸ್ಪರ್ಧಿಸುತ್ತಿದ್ದು, ಇಬ್ಬರ ನಡುವೆ ನೇರ ಹಣಾಹಣಿ ಏರ್ಪಡಲಿದೆ.

ವಿಧಾನಸಭೆಗೆ ಆಯ್ಕೆಯಾಗಿ ಈಗ ಪ್ರತಿಪಕ್ಷದ ನಾಯಕರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರ ರಾಜಿನಾಮೆಯಿಂದ ತೆರವಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಮರು ಚುನಾವಣೆ ನಡೆಯುತ್ತಿದ್ದು, ಪತಿಯ ಸ್ಥಾನವನ್ನು ಪತ್ನಿ ಉಳಿಸಿಕೊಳ್ಳುತ್ತಾರೆಯೇ ಎಂಬುದು ಕಾದು ನೋಡಬೇಕಿದೆ.

ಒತ್ತಡಕ್ಕೆ ಮಣಿದ ಅನಿತಾ
ಚನ್ನಪಟ್ಟಣ ಸೋಲಿನ ಬೇಸರದಿಂದ ಇನ್ನೂ ಹೊರ ಬರದ ಅನಿತಾ ಕುಮಾರಸ್ವಾಮಿ ಅವರಿಗೆ ಪ್ರಸಕ್ತ ಮರು ಚುನಾವಣೆಯಲ್ಲಿ ಅಭ್ಯರ್ಥಿಯಾಗಲು ಸುತಾರಾಂ ಇಷ್ಟವಿರಲಿಲ್ಲ. ಆದರೆ, ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಒತ್ತಡಕ್ಕೆ ಮಣಿದು ಸಮ್ಮತಿಸಿದ್ದಾರೆನ್ನಲಾಗಿದೆ.  ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಸಹಿತ ನಾಯಕರು ಸ್ಪರ್ಧೆಗಿಳಿಯಲು ನಿರಾಕರಿಸಿದ್ದರು. 2 ಬಾರಿ ನಡೆದ ಪಕ್ಷದ ಸಭೆಯಲ್ಲೂ ಅನಿತಾ ಅವರನ್ನೇ ಕಣಕ್ಕಿಳಿಸಬೇಕೆನ್ನುವ ಒತ್ತಾಯ ವ್ಯಕ್ತವಾಗಿತ್ತು. ಶುಕ್ರವಾರ ಬೆಳಗ್ಗೆ ದೇವೇಗೌಡ ಅವರು ಅನಿತಾ ಜತೆ ಚರ್ಚಿಸಿ, ಸ್ಪರ್ಧೆಗೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.