ಮೋದಿ ಪ್ರಧಾನಿ ಅಭ್ಯರ್ಥಿಯಾದರೆ ಮಿತ್ರ ಪಕ್ಷಗಳ ಬೆಂಬಲವಿರುವುದಿಲ್ಲ: ಪವಾರ್

ನವದೆಹಲಿ: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಭಾರತೀಯ ಜನತಾ ಪಕ್ಷ(ಬಿಜೆಪಿ) ಘೋಷಿಸಿದರೆ, ಅವರಿಗೆ ಯಾವುದೇ ಮಿತ್ರ ಪಕ್ಷಗಳ ಬೆಂಬಲ ದೊರೆಯುವುದಿಲ್ಲ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ನಾಯಕ ಹಾಗೂ ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಹೇಳಿದ್ದಾರೆ.
ಕೇಂದ್ರದಲ್ಲಿ ಬಿಜೆಪಿಗೆ ಸಮ್ಮಿಶ್ರ ಸರ್ಕಾರ ಅನಿವಾರ್ಯವಾಗಿರುವಾಗಿದೆ. ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿರುವ ಬಿಜೆಪಿಗೆ ಮಿತ್ರ ಪಕ್ಷಗಳ ಬೆಂಬಲ ಸಿಗಲಿದೆಯೇ? ಎಂದು ಶರದ್ ಪವಾರ್ ಪ್ರಶ್ನಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರಬೇಕಾದರೆ ಮಿತ್ರ ಪಕ್ಷಗಳ ಬೆಂಬಲ ಬೇಕಾಗಿದೆ. ಹೀಗಾಗಿ ಪ್ರಧಾನಿ ಅಭ್ಯರ್ಥಿ ಆಯ್ಕೆಯಲ್ಲಿ ಮಿತ್ರ ಪಕ್ಷಗಳ ಪಾತ್ರವಿರುತ್ತದೆ. ಆದರೆ ಬಿಜೆಪಿ ಮಿತ್ರ ಪಕ್ಷಗಳ ಅಭಿಪ್ರಾಯ ಪರಿಗಣಿಸದೆ ಸ್ವಂತ ನಿರ್ಣಯವನ್ನು ತೆಗೆದುಕೊಳ್ಳುತ್ತಿದೆ ಎಂದು ಪವಾರ್ ತಿಳಿಸಿದ್ದಾರೆ.
ಸುದ್ದಿವಾಹಿನಿಯೊಂದರ ಜತೆ ಮಾತನಾಡಿರುವ ಅವರು, ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಹೇಳುವುದರಿಂದ ಬಿಜೆಪಿಗೆ ಏನು ಲಾಭವಿದೆಯೊ ಗೊತ್ತಿಲ್ಲ. ಆದರೆ ಬಿಜೆಪಿಯ ಆ ನಿರ್ಧಾರಕ್ಕೆ ಮಿತ್ರ ಪಕ್ಷಗಳ ಬೆಂಬಲ ಸಿಗುವುದು ಕಷ್ಟ. ಒಂದು ವೇಳೆ ಬೆಂಬಲ ಸಿಕ್ಕರು ಅದು ಅಲ್ಪ ಪ್ರಮಾಣದ್ದಾಗಿರುತ್ತದೆ ಎಂದರು. ಸಮ್ಮಿಶ್ರ ಸರ್ಕಾರಗಳಿಂದ ಬೇಸತ್ತಿರುವ ಜನತೆಗೆ ಮತ್ತೆ ಮಿಶ್ರ ಸರ್ಕಾರವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.
ಮೋದಿ ಅವರಿಗೆ ಬಿಜೆಪಿ ಪ್ರಚಾರ ಸಮಿತಿ ಸಾರಥ್ಯ ವಹಿಸಿದ್ದರಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷ ತೀವ್ರ ಮುಜಗರಕ್ಕೆ ಒಳಗಾಗಿಗೆ ಎನ್‌ಡಿಎ ಜತೆಗಿನ 17 ವರ್ಷಗಳ ಮೈತ್ರಿ ಕಡಿದುಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


