ಈಗಿನ ಸುದ್ದಿ

ದುರ್ಗಾ ಅಮಾನತು: ಎಸ್‌ಪಿ, ಕಾಂಗ್ರೆಸ್ ನಡುವೆ ಮಾತಿನ ಸಮರ

ದುರ್ಗಾ ಅಮಾನತು: ಎಸ್‌ಪಿ, ಕಾಂಗ್ರೆಸ್ ನಡುವೆ ಮಾತಿನ ಸಮರ
Published On :

ಲಖನೌ: ಐಎಎಸ್ ಅಧಿಕಾರಿ ದುರ್ಗಾಶಕ್ತಿ ನಾಗಪಾಲ್ ಅಮಾನತು ಕುರಿತಂತೆ ಸಮಾಜವಾದಿ ಪಾರ್ಟಿ(ಎಸ್‌ಪಿ) ಕಾರ್ಯವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಟುವಾಗಿ ಟೀಕಿಸಿ, ಪ್ರಕರಣ ಸಂಬಂಧ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನಿನ್ನೆ ಪತ್ರ ಬರೆದಿದ್ದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ಆಶೋಕ್ ಕೇಮ್ಕಾ ವರ್ಗಾವಣೆ ಕುರಿತಂತೆ ಎಸ್‌ಪಿ ಕೇಂದ್ರ ಸರ್ಕಾರ ವಿರುದ್ದ ಹಾರಿಹಾಯ್ದಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಿದೇಶಾಂಗ ಸಚಿವ ಸಲ್ಮಾನ್ ಖುರ್ಶಿದ್ ಅವರು, ಐಎಎಸ್ ಅಧಿಕಾರಿ ದುರ್ಗಾಶಕ್ತಿ ಅವರ ಅಮಾನತು ಪ್ರಕರಣಕ್ಕು ಮತ್ತು ಅಶೋಕ ಕೇಮ್ಕಾ ವರ್ಗಾವಣೆ ಪ್ರಕರಣಕ್ಕು ಯಾವುದೇ ಸಾಮ್ಯತೆ ಇಲ್ಲ ಎಂದು ಖಾರವಾಗಿ ಉತ್ತರಿಸಿದ್ದಾರೆ.

ದುರ್ಗಾ ಅಮಾನತು ಕುರಿತಂತೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು. ಅಲ್ಲದೆ ದುರ್ಗಾ ಅವರಿಗೆ ಅನ್ಯಾಯವಾಗಿದ್ದು, ನ್ಯಾಯ ಒದಗಿಸಬೇಕು ಎಂದು ಸೋನಿಯಾ ಗಾಂಧಿ ಪ್ರಧಾನಿ ಅವರಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಉತ್ತರಿಸಿರುವ ಎಸ್‌ಪಿ, ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರ ಅವರ ಅಕ್ರಮ ಭೂ ವ್ಯವಹಾರ ಹಾಗೂ ಅಶೋಕ ಕೇಮ್ಕಾ ಅವರ ಅಮಾನತು ಕುರಿತಂತೆ ಪತ್ರ ಬರೆಯಬಹುದ್ದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಉತ್ತರ ಪ್ರದೇಶದ ಗೌತಮ ಬುದ್ಧ ನಗರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಮಾಫಿಯಾ ವಿರುದ್ಧ ಕ್ರಮಕ್ಕೆ ಮುಂದಾಗಿದ್ದರು. ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಜುಲೈ 27 ರಂದು ದುರ್ಗಾ ಅವರನ್ನು ಅಮಾನತುಗೊಳಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.