ಈಗಿನ ಸುದ್ದಿ

ಉ.ಪ್ರದೇಶದ ಐಎಎಸ್ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಿ: ಎಸ್ಪಿ

ಉ.ಪ್ರದೇಶದ ಐಎಎಸ್ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಿ: ಎಸ್ಪಿ
ಅಮಾನತುಗೊಂಡ ಅಧಿಕಾರಿ ದುರ್ಗಾ ಶಕ್ತಿ ನಾಗಪಾಲ್
Published On :

ನವದೆಹಲಿ: ಉತ್ತರ ಪ್ರದೇಶದ ಎಲ್ಲಾ ಐಎಎಸ್ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಿ ಎಂದು ಹೇಳುವ ಮೂಲಕ ಸಮಾಜವಾದಿ ಪಕ್ಷ ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದೆ.

ಐಎಎಸ್ ಅಧಿಕಾರಿ ದುರ್ಗಾಶಕ್ತಿ ಅವರನ್ನು ಅಮಾನತು ಮಾಡಿದ ಬೆನ್ನಲ್ಲೇ ಸಮಾಜವಾದಿ ಪಕ್ಷ ಎಲ್ಲಾ ಉತ್ತರ ಪ್ರದೇಶದ ಐಎಎಸ್ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಹೇಳಿರುವುದು ಮತ್ತುಷ್ಟು ವಿವಾದಗಳಿಗೆ ಎಡೆಮಾಡಿಕೊಟ್ಟಂತ್ತಿದೆ.

ದುರ್ಗಾ ಶಕ್ತಿ ಅವರ ವಿರುದ್ಧ ಆಧಾರ ದೊರೆತ ಹಿನ್ನಲೆಯಲ್ಲೇ ಅವರನ್ನು ಅಮಾನತು ಮಾಡಲಾಗಿದೆ. ಇದರ ಬಗ್ಗೆ ಮತ್ತೆ ಪರಿಶೀಲಿಸುವ ಅಗತ್ಯತೆ ಇಲ್ಲ. ಸರ್ಕಾರ ಸರಿಯಾದ ರೀತಿಯಲ್ಲೇ ಕ್ರಮ ಕೈಗೊಂಡಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಹೇಳಿದ್ದಾರೆ.

ದುರ್ಗಾ ಶಕ್ತಿ ಅವರ ಅಮಾನತು ಸರಿ ಎಂದು ಸಮರ್ಥಿಸಿಕೊಂಡಿರುವ ಅಖಿಲೇಶ್, ಯಾವುದೇ ಅಧಿಕಾರಿಗಳು ತಪ್ಪು ಮಾಡಿದರೆ ಅವರ ವಿರುದ್ಧ ಇದೇ ರೀತಿ ಕಠಿಣ ಕ್ರಮಕೈಗೊಳ್ಳಲಾಗುತ್ತದೆ. ತಪ್ಪು ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳುವುದೇ ಸರ್ಕಾರದ ಕೆಲಸ ಎಂದು ತಿಳಿಸಿದ್ದಾರೆ.

ನಂತರ ಮಾತನಾಡಿದ  ಅಖಿಲೇಶ್ ಸಂಬಂಧಿ ಹಾಗೂ ರಾಜ್ಯಸಭಾ ಸದಸ್ಯ ರಾಮ್ ಗೋಪಾಲ್ ಯಾದವ್ ಅವರು, ದುರ್ಗಾ ಅಮಾನತ್ತಿನ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಿ ಎಂದು ಒತ್ತಡ ಹೇರುತ್ತಿರುವ ಕೇಂದ್ರ ಸರ್ಕಾರ, ಬೇಕಾದರೆ ಎಲ್ಲಾ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಲಿ ಎಂದು ಹೇಳಿದ್ದಾರೆ.

ದುರ್ಗಾ ಅಮಾನತು ಕುರಿತಂತೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು. ಅಲ್ಲದೆ ದುರ್ಗಾ ಅವರಿಗೆ ಅನ್ಯಾಯವಾಗಿದ್ದು, ನ್ಯಾಯ ಒದಗಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಉತ್ತರಿಸಿರುವ ಎಸ್ಪಿ, ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರ ಅವರ ಅಕ್ರಮ ಭೂ ವ್ಯವಹಾರ ಹಾಗೂ ಅಶೋಕ ಕೇಮ್ಕಾ ಅವರ ಅಮಾನತು ಕುರಿತಂತೆ ಪತ್ರ ಬರೆಯಬಹುದ್ದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿತ್ತು.

ಉತ್ತರ ಪ್ರದೇಶದ ಗೌತಮ ಬುದ್ಧ ನಗರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳಲು ದುರ್ಗಾ ಮುಂದಾಗಿದ್ದರು. ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಜುಲೈ 27 ರಂದು ದುರ್ಗಾ ಅವರನ್ನು ಅಮಾನತುಗೊಳಿಸಿದ್ದರು.

ಇದನ್ನು ವಿರೋಧಿಸಿ ಉತ್ತರ ಪ್ರದೇಶದ ಐಎಎಸ್ ಅಧಿಕಾರಿಗಳ ಸಂಘ ಪ್ರತಿಭಟನೆ ನಡೆಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.