ಈಗಿನ ಸುದ್ದಿ

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಬಿಸಿಸಿಐ

Published On :

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನಲ್ಲಿ ನಡೆದ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಸಿಸಿಐ ನೇಮಿಸಿದ್ದ ತನಿಖಾ ಸಮಿತಿ ಕಾನೂನು ಬಾಹಿರ ಎಂದು ಹೇಳಿ ಸಮಿತಿ ವರದಿಯನ್ನು ರದ್ದುಗೊಳಿಸಿದ ಹೈಕೋರ್ಟ್ ಕ್ರಮವನ್ನು ಪ್ರಶ್ನಿಸಿ ಬಿಸಿಸಿ ಸೋಮವಾರ ಸುಪ್ರೀಂ ಮೆಟ್ಟಿಲೇರಿದೆ.

ಬಿಸಿಸಿಐ ನೇಮಿಸಿದ್ದ ಇಬ್ಬರು ನ್ಯಾಯಾಧೀಶರನ್ನೋಳಗೊಂಡ ತನಿಖಾ ಸಮಿತಿ ಕಾನೂನು ಬಾಹಿರ ಮತ್ತು ಅಸಂವಿಧಾನಿಕವಾದದ್ದು ಎಂದು ಬಾಂಬೆ ಹೈಕೋರ್ಟ್ ಕಳೆದ ವಾರ ತಿಳಿಸಿತ್ತು. ಇದನ್ನು ಪ್ರಶ್ನಿಸಿ ಬಿಸಿಸಿಐ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

ಹಗರಣಕ್ಕೆ ಸಂಬಂಧಿಸಿದಂತೆ ಗುರುನಾಥ್ ಮೇಯಪ್ಪನ್ ಮತ್ತು ರಾಜ್ ಕುಂದ್ರಾ ಅವರನ್ನು ಆರೋಪ ಮುಕ್ತಗೊಳಿಸಿ ನೀಡಿದ್ದ ತನಿಖಾ ಸಮಿತಿಯ ವರದಿಯು ಪಕ್ಷಪಾತದಿಂದ ಕೂಡಿದೆ ಎಂದು ಆರೋಪಿಸಿ ಬಿಹಾರ್ ಕ್ರಿಕೆಟ್ ಅಸೋಸಿಯೇಷನ್ ಮತ್ತು ಅದರ ಕಾರ್ಯದರ್ಶಿ ಆದಿತ್ಯ ವರ್ಮಾ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿಸಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಬಿಸಿಸಿಐ ನೇಮಿಸಿರುವ ತನಿಖಾ ಆಯೋಗವು ಕಾನೂನು ಬಾಹಿರ ಮತ್ತು ಅಸಂವಿಧಾನಿಕವಾಗಿದೆ ಎಂದು ಹೈಕೋರ್ಟ್ ತೀರ್ಪ ನೀಡಿತ್ತು.

ಪ್ರಕರಣದ ಕುರಿತು ತನಿಖೆ ನಡೆಸಲು ರಚಿಸಲಾಗಿದ್ದ ಸಮಿತಿ ಸಂವಿಧಾನಬದ್ಧವಾಗಿರಲಿಲ್ಲ. ಅಲ್ಲದೆ, ಇದು ಬಿಸಿಸಿಐನ 6ನೇ ಕಲಂನ ನಿಯಮ 2.2 ಮತ್ತು 3 ಅನ್ನು ಉಲ್ಲಂಘಿಸಿದೆ ಎಂದು ನ್ಯಾಯಾಮೂರ್ತಿ ಎಂ.ಎಸ್ ಸೋನಾಕ್ ಮತ್ತು ಎಸ್.ಎಫ್ ವಾಜಿಫ್ದಾರ್ ಅವರನ್ನೋಳಗೊಂಡ ನ್ಯಾಯಾಪೀಠ 61 ಪುಟಗಳ ತೀರ್ಪಿನಲ್ಲಿ ತಿಳಿಸಿದೆ.

ಐಪಿಎಲ್ ನೀತಿ ಸಮಿತಿಗೆ ಬಿಸಿಸಿಐ ಐದು ಸದಸ್ಯರನ್ನು ಆಯ್ಕೆ ಮಾಡಿದೆ. ಸಮಿತಿಯಲ್ಲಿ ಇನ್ನು ಹೆಚ್ಚಿನ ಸದಸ್ಯರನ್ನು ಸೇರಿಸಲು ಬಿಸಿಸಿಐಗೆ ಅಧಿಕಾರವಿದೆ. ಆದರೆ, ಐಪಿಎಲ್ ನೀತಿ ಸಮಿತಿಯ ಸದಸ್ಯರನ್ನು ಹೊರತುಪಡಿಸಿ ತನಿಖಾ ಸಮಿತಿಯನ್ನು ರಚಿಸುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.