ಪಾಕ್ ಸೈನಿಕರಿಂದ ಐವರು ಭಾರತೀಯ ಯೋಧರ ಹತ್ಯೆ

ಶ್ರೀನಗರ: ಮತ್ತೆ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ಥಾನ ಸೈನಿಕರು, ಕರ್ತವ್ಯನಿರತ ಐವರು ಭಾರತೀಯ ಯೋಧರನ್ನು ಹತ್ಯೆ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಕಳೆದ ರಾತ್ರಿ ಗಸ್ತು ತಿರುಗುತ್ತಿದ್ದ ಭಾರತೀಯ ಯೋಧರ ಮೇಲೆ ಪಾಕ್ ಸೈನಿಕರು ದಾಳಿ ಮಾಡಿದ್ದಾರೆ. ಈ ವಿಷಯ ಇಂದು ಸಂಸತ್ತಿನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿ, ತೀವ್ರ ಕೋಲಾಹಲಕ್ಕೆ ಕಾರಣವಾಯಿತು. ನಂತರ ರಾಜ್ಯಸಭೆಯ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು.
ಈ ಸಂಬಂಧ ಲೋಕಸಭೆಯಲ್ಲಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷ ಬಿಜೆಪಿ, ಸರ್ಕಾರ ಇದಕ್ಕೆ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರಕ್ಷಣಾ ಸಚಿವ ಎ.ಕೆ.ಆಂಟಿನಿ, ಈ ವಿಚಾರದಲ್ಲಿ ಸರ್ಕಾರ ತುರ್ತು ಕ್ರಮ ಕೈಗೊಂಡಿದೆ. ಪಾಕ್ಗೆ ತಕ್ಕ ಉತ್ತರ ನೀಡಲಾಗುವುದು ಎಂದು ತಿಳಿಸಿದರು.
ಇನ್ನು ಸಮಾಜವಾದಿ ಪಕ್ಷದಿಂದ ನಿಲವಳಿ ಸೂಚನೆ ಮಂಡಿಸಿ, ಮಾತನಾಡಿದ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು, ಪಾಕಿಸ್ತಾನ ಎಂದೂ ನಂಬಿಕೆಗೆ ಅರ್ಹವಲ್ಲ. ಕದನ ವಿರಾಮ ಉಲ್ಲಂಘನೆ ಬಗ್ಗೆ ಕೇಂದ್ರ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದರು. ಅಲ್ಲದೆ ಈ ಬಗ್ಗೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಉತ್ತರಿಸಬೇಕು ಎಂದು ಒತ್ತಾಯಿಸಿದರು.
ನಿನ್ನೆ ಮಧ್ಯರಾತ್ರಿ 2 ಗಂಟೆಯ ಸುಮಾರಿಗೆ ಪಾಕ್ ಸೇನೆ ನಡೆಸಿದ ದಾಳಿಯಲ್ಲಿ ಓರ್ವ ಸುಬೆದಾರ್ ಹಾಗೂ ನಾಲ್ವರು ಯೋಧರು ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


