ಕರಾಚಿಯಲ್ಲಿ ಬಾಂಬ್ ಸ್ಫೋಟ: 11 ಮಕ್ಕಳು ಸಾವು
ಇಸ್ಲಾಮಾಬಾದ್: ಪಾಕಿಸ್ತಾನದ ಕೋಟೆ ನಗರಿ ಕರಾಚಿಯಲ್ಲಿ ಬುಧವಾರ ಬೆಳಗಿನ ಜಾವ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 11 ಮಕ್ಕಳು ಮೃತಪಟ್ಟಿದ್ದಾರೆ ಮತ್ತು 24 ಮಕ್ಕಳು ಗಾಯಗೊಂಡಿದ್ದಾರೆ ಎಂದು ಜೀಯೊ ನ್ಯೂಸ್ ವರದಿ ಮಾಡಿದೆ.
ಕರಾಚಿಯ ಮಾರುಕಟ್ಟೆ ಪ್ರದೇಶದಲ್ಲಿ ಉಗ್ರರು ಬೈಕೊಂದಕ್ಕೆ ಬಾಂಬ್ ಫಿಕ್ಸ್ ಮಾಡಿ ಸ್ಫೋಟಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಲ್ಯಾರಿ ಪ್ರದೇಶದಲ್ಲಿ ನಡೆಯುತ್ತಿದ್ದ ಫೂಟ್ಬಾಲ್ ಪಂದ್ಯಾವಳಿ ಅಂತ್ಯಗೊಂಡ ತಕ್ಷಣವೇ ಬಾಂಬ್ ಸ್ಫೋಟಗೊಂಡಿದೆ ಎಂದು ಲ್ಯಾರಿ ಕ್ಷೇತ್ರದ ಸಂಸದ ಸನಿಯಾ ನಾಝ್ ಅವರು ಹೇಳಿದ್ದಾರೆ.
ಸ್ಥಳೀಯ ಮಕ್ಕಳ ಎರಡು ತಂಡಗಳ ನಡುವೆ ನಡೆಯುತ್ತಿದ್ದ ಫೂಟ್ಬಾಲ್ ಪಂದ್ಯ ಅಂತ್ಯಗೊಂಡ ನಂತರ, ಜನ ಅಲ್ಲಿಂದ ತೆರಳುತ್ತಿದ್ದ ವೇಳೆ, ಬೆಳಗಿನ ಜಾವ 2.40ರ ಸುಮಾರಿಗೆ ಬಾಂಬ್ ಸ್ಫೋಟಗೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಮೃತಪಟ್ಟ ಹಾಗೂ ಗಾಯಗೊಂಡವರೆಲ್ಲ 12ರಿಂದ 14 ವರ್ಷದ ಮಕ್ಕಳಾಗಿದ್ದಾರೆ ಎನ್ನಲಾಗಿದೆ. ಇನ್ನು ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

