ಈಗಿನ ಸುದ್ದಿ

ಮರಳು ಮಾಫಿಯಾ: ಐಎಎಸ್ ಅಧಿಕಾರಿ ಮೇಲೆ ಹಲ್ಲೆ

Published On :

ಹಿಮಾಚಲ ಪ್ರದೇಶ: ಮರಳು ದಂಧೆಯಲ್ಲಿ ತೊಡಗಿದ್ದ ಅವರ ಮೇಲೆ ದಾಳಿ ಮಾಡಿದ ಐಎಎಸ್ ಅಧಿಕಾರಿ ಮೇಲೆ ಮರಳು ಮಾಫಿಯಾ ದಂದೆಕೋರರು ಗುರುವಾರ ಹಲ್ಲೆ ಮಾಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ದಂಧೆ ಮೇಲೆ ಹಿಮಾಚಲ ಪ್ರದೇಶದ ಐಎಎಸ್ ಅಧಿಕಾರಿಯಾದ ಯೂನಿಸ್‌ಖಾನ್ ಎಂಬುವರು ದಾಳಿ ನಡೆಸಿದರು. ಈ ಸಂದರ್ಭದಲ್ಲಿ ದಂಧೆಕೋರರು ಅವರ ಮೇಲೆ ಹಲ್ಲೆ ಮಾಡಿದ್ದಾರೆ.

ದೇಶದಲ್ಲಿ ಮರಳು ಮಾಫಿಯಾ ಅವ್ಯಾಹತವಾಗಿ ನಡೆಯುತ್ತಿದ್ದು, ಅಕ್ರಮವನ್ನು ಹತ್ತಿಕ್ಕಲು ಐಎಎಸ್ ಅಧಿಕಾರಿಗಳು ಮುಂದಾಗಿದ್ದಾರೆ. ರಾಜಕೀಯ ಶಕ್ತಿಗಳ ಪ್ರಭಾವದಿಂದಾಗಿ ಮರಳು ಮಾಫಿಯಾ ಯಾವುದೇ ಅಡೆತಡೆಗಳಿಲ್ಲದೆ ನಿರಂತರವಾಗಿ ನಡೆಯುತ್ತಿದ್ದು, ದಂಧೆಯನ್ನು ತಡೆಯಲು ಅಧಿಕಾರಿಗಳು ಮುಂದಾದರೆ ಯಾವುದೇ ಭಯವಿಲ್ಲದೆ ಅಧಿಕಾರಿಗಳ ಮೇಲೆ ಹಲ್ಲೆಗೆ ಮುಂದಾಗುತ್ತಿದ್ದಾರೆ.

ಉತ್ತರ ಪ್ರದೇಶದ ಯಮುನಾ ನದಿ ತೀರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಮಾಫಿಯಾ ವಿರುದ್ಧ ಕ್ರಮಕ್ಕೆ ಮುಂದಾಗಿದ್ದ ಗೌತಮ ಬುದ್ಧ ನಗರದ ಐಎಎಸ್ ಅಧಿಕಾರಿ ದುರ್ಗಾಶಕ್ತಿ ನಾಗಪಾಲ್ ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಜುಲೈ 27 ರಂದು ಅಮಾನತು ಮಾಡಿದರು. ಇದೀಗ ಹಿಮಾಚಲದಲ್ಲಿ ಅಕ್ರಮ ತಡೆಯಲು ಮುಂದಾದ ಅಧಿಕಾರಿ ಮೇಲೆ ಹಲ್ಲೆ ನಡೆದಿದೆ.

ದೇಶದ ಎಲ್ಲಾ ನದಿಗಳ ತೀರದಲ್ಲಿ ಮರಳು ಮಾಫಿಯಾದಿಂದಾಗಿ ಪರಿಸರಕ್ಕೆ ಹಾನಿಯಾಗುತ್ತದೆ. ಆದರಿಂದ ಮರಳು ಮಾಫಿಯಾವನ್ನು ನಿಲ್ಲಿಸುವಂತೆ ರಾಷ್ಟ್ರೀಯ ಹಸಿರು ಪೀಠ ಆದೇಶಿಸಿತ್ತು. ಆದರೆ ದೇಶಾದ್ಯಂತ ಮರಳು ಮಾಫಿಯಾ ರಾಜಾರೋಷವಾಗಿ ನಡೆಯುತ್ತಿದ್ದು, ಅದನ್ನು ತಡಿಯಲು ಮುಂದಾದ ಅಧಿಕಾರಿಗಳ ಮೇಲೆ ಹಲ್ಲೆಗಳಾಗುತ್ತಿವೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.