ಈಗಿನ ಸುದ್ದಿ

ಸಚಿವ ಸಂಪುಟ ಸಭೆ ಮುಕ್ತಾಯ: ಮಹತ್ವದ ನಿರ್ಣಯಗಳ ಅಂಗೀಕಾರ?

ಸಚಿವ ಸಂಪುಟ ಸಭೆ ಮುಕ್ತಾಯ: ಮಹತ್ವದ ನಿರ್ಣಯಗಳ ಅಂಗೀಕಾರ?
Published On :

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳಿಗೆ ಸಭೆ ಅಂಗೀಕಾರ ನೀಡಿದೆ.

ಸರ್ಕಾರಿ ಭೂಮಿ ಒತ್ತುವರಿ ಮತ್ತು ಲೋಕಸಭಾ ಉಪಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ನಡೆದ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಆಢಳಿತಾರೂಢ ಕಾಂಗ್ರೆಸ್ ಪಕ್ಷ ಹಲವು ಮಹತ್ವದ ನಿರ್ಣಯಗಳನ್ನು ಅಂಗೀಕರಿಸಿದೆ ಎನ್ನಲಾಗುತ್ತಿದೆ. ಪ್ರಮುಖವಾಗಿ ಸರ್ಕಾರಿ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರಮುಖ ನಿರ್ಣಯ ಕೈಗೊಳ್ಳಲಾಗಿದ್ದು, ಆ ಪ್ರಕಾರ ಇನ್ನು ಮುಂದೆ ಯಾವುದೇ ಅಧಿಕಾರಿ, ಶಾಸಕ ಮತ್ತು ಸಚಿವರು ಅನಗತ್ಯವಾಗಿ ಸರ್ಕಾರಿ ಭೂಮಿಯನ್ನು ಪರಭಾರೆ ಅಥವಾ ಗುತ್ತಿಗೆ ನೀಡುವಂತಿಲ್ಲ. ಅಲ್ಲದೆ ಸರ್ಕಾರಿ ಭೂಮಿಯನ್ನು ಅನ್ಯ ಉದ್ದೇಶಗಳಿಗೆ ಬಳಸಬಾರದು ಎಂದು ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ.

ಬೆಂಗಳೂರು ಸುತ್ತಮುತ್ತಲ ಸುಮಾರು 18 ಕಿ.ಮೀ ವ್ಯಾಪ್ತಿಯಲ್ಲಿನ ಸರ್ಕಾರಿ ಭೂಮಿಯನ್ನು ಕಾಯ್ದಿರಿಸಿದ ರಕ್ಷಣಾ ಪ್ರದೇಶವಾಗಿ ಘೋಷಣೆ ಮಾಡಲು ಸರ್ಕಾರ ನಿರ್ಧರಿಸಿದೆ. ಅಂತೆಯೇ ಎಪಿಎಂಸಿಗಳ ಸುಧಾರಣೆಗಾಗಿ ಈ ಹಿಂದೆ ರಚಿತವಾಗಿದ್ದ ಸಮಿತಿಗೆ ಸಹಕಾರಿಯಾಗಲೆಂದು ಉಪ ಸಮಿತಿ ರಚಿಸುವ ನಿರ್ಧಾರಕ್ಕೆ ಸಭೆ ಒಪ್ಪಿಗೆ ನೀಡಿದೆ.

ಇನ್ನುಳಿದಂತೆ ಲೋಕಸಭಾ ಉಪ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ರಣತಂತ್ರ ರಚಿಸಿದೆ. ಮೂಲಗಳ ಪ್ರಕಾರ ಶತಾಯಗತಾಯ ಲೋಕಸಭಾ ಉಪ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಶಾಸಕ ಮತ್ತು ಸಚಿವರ ಶ್ರಮವಹಿಸಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರಗಳಿಗೂ ಸಚಿವರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗುತ್ತದೆ. ನೇಮಕಗೊಳ್ಳುವ ಸಚಿವರು ತಮ್ಮ ತಮ್ಮ ಕ್ಷೇತ್ರದಲ್ಲಿ ಶ್ರಮವಹಿಸಿ ಕೆಲಸ ಮಾಡಬೇಕು. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಸಚಿವರಿಗೆ ಉಸ್ತುವಾರಿ ಜವಾಬ್ದಾರಿ ನೀಡಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.