ಸೈನಿಕರ ಬಗ್ಗೆ ವಿವಾದಿತ ಹೇಳಿಕೆ: ಬಿಹಾರ ಸಚಿವರ ಕ್ಷಮೆ ಯಾಚನೆ

ಪಾಟ್ನಾ: ಸೈನಿಕರ ಬಗ್ಗೆ ವಿವಾದಿತ ಹೇಳಿಕೆ ನೀಡಿ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದ್ದ ಬಿಹಾರ ಸಚಿವ ಭೀಮ್ ಸಿಂಗ್ ಅವರು ಕ್ಷಮೆ ಕೋರಿದ್ದಾರೆ.
ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಯೋಧರ ಹತ್ಯೆ ಕುರಿತು ಮಾತನಾಡಿರುವ ಅವರು ಈ ಹಿಂದೆ ಜನರು ಸಾಯಲೆಂದೇ ಸೇನೆಯನ್ನು ಸೇರುತ್ತಾರೆ ಎಂದು ಹೇಳುವ ಮೂಲಕ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಸಚಿವರ ಈ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ಸೇರಿದಂತೆ ಸ್ವತಃ ಜೆಡಿಯು ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿತು. ಅಲ್ಲದೆ ಸಚಿವ ಭೀಮ್ ಸಿಂಗ್ ಅವರಿಗೆ ಭಾವನೆಗಳೇ ಇಲ್ಲ ಎಂದು ಖಂಡಿಸಿತು.
ಅಲ್ಲದೆ ಸ್ವತಃ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕೂಡ ಸಚಿವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು ಎಂದು ಮೂಲಗಳು ತಿಳಿಸಿವೆ. ಇದೀಗ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿರುವ ಭೀಮ್ ಸಿಂಗ್ ಅವರು ಕ್ಷಮೆಯಾಚಿಸಿದ್ದಾರೆ.
ಹೇಳಿಕೆ ತಪ್ಪೆಂದು ಒಪ್ಪಿಕೊಳ್ಳದ ಭೀಮ್ ಸಿಂಗ್
ಸೈನಿಕರ ಬಗ್ಗೆ ವಿವಾದಿತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿರುವ ಬಿಹಾರದ ಗ್ರಾಮೀಣಾಭಿವೃದ್ಧಿ ಸಚಿವ ಭೀಮ್ ಸಿಂಗ್ ಅವರು ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದರೂ, ತಮ್ಮ ಹೇಳಿಕೆಯನ್ನು ತಪ್ಪು ಎಂದು ಒಪ್ಪಿಕೊಂಡಿಲ್ಲ. ಬದಲಿಗೆ ತಮ್ಮ ಹೇಳಿಕೆಗೆ ಬದ್ಧರಿರುವುದಾಗಿ ಹೇಳಿದ್ದಾರೆ. ಕೇವಲ ಒಂದು ವರ್ಗಕ್ಕೆ ನೋವಾಗಬಾರದೆಂಬ ಒಂದೇ ಕಾರಣಕ್ಕೆ ಕ್ಷಮೆಯಾಚಿಸುತ್ತಿರುವುದಾಗಿ ತಿಳಿಸಿದ್ದಾರೆ.
ಕಳೆದ ಸೋಮವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಚಕನ್ ದ ಬಾಗ್ ಮಿಲಿಟರಿ ಸೆಕ್ಟರ್ನಲ್ಲಿ ಕಾವಲು ಕಾಯುತ್ತಿದ್ದ ಭಾರತೀಯ ಐವರು ಯೋಧರನ್ನು ಪಾಕಿಸ್ತಾನದ ಸುಮಾರು 20 ಯೋಧರು ಸುತ್ತುವರೆದು ಗುಂಡಿನ ದಾಳಿ ನಡೆಸಿ ಕೊಂದು ಹಾಕಿದ್ದರು. ಘಟನೆಯಲ್ಲಿ ಮಹಾರಾಷ್ಟ್ರ ಮತ್ತು ಬಿಹಾರ ರಾಜ್ಯಗಳ ಒಟ್ಟು ಐವರು ಯೋಧರು ಸಾವನ್ನಪ್ಪಿದ್ದರು. ಮೃತ ಯೋಧರ ಕುಟುಂಬಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, 10 ಲಕ್ಷ ರು.ಗಳ ಪರಿಹಾರ ಧನವನ್ನು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


