ಅಕ್ರಮ ಆಸ್ತಿ ಗಳಿಕೆ: ಮಾಯಾವತಿಗೆ 'ಸುಪ್ರೀಂ' ನೆಮ್ಮದಿ
ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಭೀತಿ ಎದುರಿಸುತ್ತಿದ್ದ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಬಹುಜನ ಸಮಾಜವಾದಿ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರಿಗೆ ಸುಪ್ರೀಂ ಕೋರ್ಟ್ ನೆಮ್ಮದಿ ನೀಡಿದೆ.
ಮಾಯಾವತಿ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಪುನಃ ವಿಚಾರಣೆಗೊಳಪಡಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನ್ಯಾ.ಪಿ.ಸದಾಶಿವಂ ಮತ್ತು ದೀಪಕ್ ಮಿಶ್ರಾ ಅವರ ನೇತೃತ್ವದ ದ್ವಿಸದಸ್ಯ ಪೀಠ ಇಂದು ಪ್ರಕರಣದ ವಿಚಾರಣೆಯನ್ನು ನಡೆಸಿ, ದೂರುದಾರರ ಅರ್ಜಿಯನ್ನು ವಜಾಗೊಳಿಸಿದೆ. ಮಾಯಾವತಿ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಪುನರ್ ವಿಚಾರಣೆಗೊಳಪಡಿಸಲು ಸಿಬಿಐ ತನಿಖಾ ಸಂಸ್ಥೆ ಸ್ವತಂತ್ರವಾಗಿದ್ದು, ಅವಶ್ಯಕತೆ ಇದ್ದರೆ ಸಿಬಿಐ ಮಾಯಾವತಿ ಅವರನ್ನು ವಿಚಾರಣೆಗೊಳಪಡಿಸಬಹುದಾಗಿದೆ ಎಂದು ಪೀಠ ಸ್ಪಷ್ಟಪಡಿಸಿದೆ.
ಅಲ್ಲದೆ ಪ್ರಸ್ತುತ ನ್ಯಾಯಾಲಯದಲ್ಲಿ ತಾಜ್ ಕಾರಿಡಾರ್ ಅಕ್ರಮದಲ್ಲಿ ಮಾಯಾವತಿ ಅವರ ಪಾತ್ರದ ಕುರಿತು ವಿಚಾರಣೆ ನಡೆಯುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ನ್ಯಾಯಾಲಯದ ಕಲಾಪದ ನಂತರ ಮಾತನಾಡಿದ ಮಾಯಾವತಿ ಅವರ ಪರ ವಕೀಲ ಸತೀಶ್ ಚಂದ್ರ ಮಿಶ್ರಾ ಅವರು, ಮಾಯಾವತಿ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಪುನರ್ ವಿಚಾರಣೆಗೊಳಪಡಿಸುವ ನಿಟ್ಟಿನಲ್ಲಿ ದೂರುದಾರರು ಯಾವುದೇ ಪ್ರಮುಖ ಸಾಕ್ಷ್ಯ ಒದಗಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ನ್ಯಾಯಾಲಯ ಪ್ರಕರಣವನ್ನು ಪುನರ್ ವಿಚಾರಣೆಗೊಳಪಡಿಸಲು ನಿರಾಕರಿಸಿದ್ದು, ಪ್ರಕರಣ ಶೀಘ್ರದಲ್ಲಿಯೇ ಅಂತ್ಯಗೊಳ್ಳಲಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

