ಮೇಯರ್ ಸಾಮಾನ್ಯವರ್ಗಕ್ಕೆ, ಉಪಮೇಯರ್ ಎಸ್ಟಿ ಮಹಿಳೆಗೆ: ಹೈಕೋರ್ಟ್ ತೀರ್ಪು

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಮೀಸಲಾತಿ ವಿವಾದಕ್ಕೆ ಕೊನೆಗು ಹೈಕೋರ್ಟ್ ಅಂತ್ಯ ಹಾಡಿದ್ದು, ಮೇಯರ್ ಹುದ್ದೆಯನ್ನು ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಹುದ್ದೆಯನ್ನು ಪರಿಶಿಷ್ಟ ಪಂಗಡ(ಎಸ್ಟಿ)ದ ಮಹಿಳೆಗೆ ಮೀಸಲಿಡಬೇಕು ಎಂದು ಕೋರ್ಟ್ ಗುರುವಾರ ತೀರ್ಪು ನೀಡಿದೆ.
ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಸಂಬಂಧಿಸಿದಂತೆ ಈ ಹಿಂದೆ ಇದ್ದ ಮೀಸಲಾತಿ ಪ್ರಶ್ನಿಸಿ ಪಾಲಿಕೆ ಸದ್ಯಸರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಮೇಯರ್ ಹಾಗೂ ಉಪಮೇಯರ್ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಾಲಿಕೆ ಸದಸ್ಯ ಲೋಕೇಶ್ನಾಯಕ್ ಹಾಗೂ ಇಂದಿರಾ ಸೇರಿದಂತೆ ಮತ್ತಿತರರು ಸೇರಿ ಈ ಹಿಂದೆ ಇದ್ದ ಮೀಸಲು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ತೀರ್ಪನ್ನು ಕಾಯ್ದಿರಿಸಿದ್ದ ಹೈಕೋರ್ಟ್ನ ಏಕಸದಸ್ಯ ಪೀಠ ಇಂದು ಮಹತ್ವದ ಆದೇಶ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ, ಪಾಲಿಕೆ ಹಾಗೂ ಅರ್ಜಿದಾರರ ಅಹವಾಲನ್ನು ಜುಲೈ 23ರಂದು ಆಲಿಸಿದ್ದ ನ್ಯಾಯಮೂರ್ತಿ ನಾರಾಯಣಸ್ವಾಮಿ ಅವರಿದ್ದ ಏಕಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿತ್ತು.
ಫೆ.7 2011ರ ಅಧಿಸೂಚನೆ ಪ್ರಕಾರ ಮೇಯರ್ ಸ್ಥಾನವನ್ನು ಸಾಮಾನ್ಯವರ್ಗದ ಮಹಿಳೆಗೆ ಹಾಗೂ ಉಪಮೇಯರ್ ಸ್ಥಾನವನ್ನು ಬಿಸಿಎ ವರ್ಗಕ್ಕೆ ಮೀಸಲಿಡಲಾಗಿತ್ತು. ಆದರೆ ಸರ್ಕಾರ ಫೆ.8 2013 ರಂದು ಹೊಸ ಆದೇಶ ಹೊರಡಿಸಿ ಮೇಯರ್ ಹುದ್ದೆಯನ್ನು ಸಾಮಾನ್ಯವರ್ಗಕ್ಕೆ ಮೀಸಲಿಟ್ಟಿತ್ತು. ಸಂವಿಧಾನ ಬದ್ಧವಾಗಿ ಮೇಯರ್ ಸ್ಧಾನವನ್ನು ಇಲ್ಲಿಯವರೆಗು ಪರಿಶಿಷ್ಟ ಪಂಗಡಕ್ಕೆ ನೀಡಿಲ್ಲ ಎಂದು ಆರೋಪಿಸಿ ಅರ್ಜಿದಾರರು ಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿದಾರರು ಸಲ್ಲಿಸಿದ್ದ ಅಹವಾಲನ್ನು ಭಾಗಶಃ ಅಂಗೀಕರಿಸಿದ ಏಕಸದಸ್ಯ ಪೀಠ ಮೇಯರ್ ಹುದ್ದೆಯನ್ನು ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಹುದ್ದೆಯನ್ನು ಎಸ್ಟಿಗೆ ಸೇರಿದ ಮಹಿಳೆಗೆ ಮೀಸಲಿಡಬೇಕು ಎಂದು ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


