ಈಗಿನ ಸುದ್ದಿ

ಉಗ್ರರ ದಾಳಿ ಸಂಚು; ದೆಹಲಿಯಲ್ಲಿ ಕಟ್ಟೆಚ್ಚರ

ಉಗ್ರರ ದಾಳಿ ಸಂಚು; ದೆಹಲಿಯಲ್ಲಿ ಕಟ್ಟೆಚ್ಚರ
Published On :

ನವದೆಹಲಿ: ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು ಸಂಚು ರೂಪಿಸಿದ್ದಾರೆ ಎಂಬ ಗುಪ್ತಚರ ಇಲಾಖೆಯ ಸೂಚನೆಯನ್ವಯ ದೆಹಲಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ ಎಂದು ದೆಹಲಿಯ ವಿಶೇಷ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವಾ ಅವರು ಶುಕ್ರವಾರ ತಿಳಿಸಿದ್ದಾರೆ.

ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿಯನ್ವಯ ಕಟ್ಟೆಚ್ಚರ ವಹಿಸುವಂತೆ ದೆಹಲಿ ಪೊಲೀಸರಿಗೆ ಕೇಂದ್ರ ಗುಪ್ತಚಾರ ಇಲಾಖೆ  ಸೂಚಿಸಿತ್ತು.

ದೇಶದ ಶಕ್ತಿ ಕೇಂದ್ರ ದೆಹಲಿಯಲ್ಲಿ ಉಗ್ರರು ವಿಧ್ವಂಸಕ ಕೃತ್ಯವನ್ನು ಎಸಗಲಿದ್ದಾರೆ ಎಂದು ಗುಪ್ತಚಾರ ಇಲಾಖೆ ದೆಹಲಿ ಪೊಲೀಸರಿಗೆ ಪತ್ರ ಬರೆದಿದ್ದು, ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಹಾಗೂ ಅಹಿತಕರ ಘಟನೆ ನಡೆಯದಂತೆ ಸೂಕ್ತ ಭದ್ರತೆ ಕಲ್ಪಿಸುವಂತೆ ಸೂಚಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

2008ರ ಮುಂಬೈ ದಾಳಿಯ ಮಾಸ್ಟರ್‌ಮೈಂಡ್ ಲಷ್ಕರ್-ಎ-ತೊಯ್ಬಾ ಸಂಘಟನೆಯ ಮುಖ್ಯಸ್ಥ ಹಫೀಜ್ ಮುಹಮ್ಮದ್ ಸಹೀದ್ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಿ ದೇಶದ ಶಾಂತಿಗೆ ಧಕ್ಕೆ ತರಲು ಯತ್ನಿಸುತ್ತಿದ್ದು, ಈ ಸಂಬಂಧ ಎಚ್ಚರಿಕೆ ವಹಿಸುವಂತೆ ಇಲಾಖೆ ತಿಳಿಸಿದೆ.

ಸ್ವಾತಂತ್ರೋತ್ಸವ ದಿನಾಚರಣೆಗೆ ಕೆಲವೇ ದಿನಗಳು ಅಂತರ ಇರುವುದರಿಂದ ಇದನ್ನೇ ಗುರಿಯಾಗಿರುಸಿಕೊಂಡಿರುವ ಉಗ್ರರು ದೆಹಲಿಯ ಕೆಂಪು ಕೋಟೆ ಬಳಿ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎನ್ನಲಾಗಿದೆ.

ರಂಜಾನ್ ಪ್ರಯುಕ್ತ ಇಂದು ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ಪಾರ್ಥನೆಯಲ್ಲಿ ಪಾಲ್ಗೊಂಡಿರುವ ಲಷ್ಕರ್-ಎ-ತೊಯ್ಬಾದ ಸಹೀದ್, ಈ ಸಂದರ್ಭ ಕಟು ಭಾರತ ವಿರೋಧಿ ಸಂದೇಶಗಳನ್ನು ಟ್ವಿಟ್ ಮಾಡುವ ಮೂಲಕ ಈದ್ ಶುಭಾಶಯ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.