ಈಗಿನ ಸುದ್ದಿ

ದಾಳಿ ಭೀತಿ: ರಾಯಭಾರಿಗಳ ವಾಪಸ್ ಕರೆಸಿಕೊಂಡ 'ದೊಡ್ಡಣ್ಣ'

Published On :

ಇಸ್ಲಾಮಾಬಾದ್: ಅಮೆರಿಕ ನಾಗರೀಕರ ವಿರುದ್ಧ ಅಲ್ ಖೈದಾ ಸಂಘಟನೆ ದಾಳಿ ನಡೆಸುವ ಕುರಿತು ಮಾಹಿತಿ ಪಡೆದಿರುವ ಅಮೆರಿಕ, ಪಾಕಿಸ್ತಾನದಲ್ಲಿರುವ ತನ್ನ ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಅಮೆರಿಕ ಪ್ರಜೆಗಳನ್ನು ಗುರಿಯಾಗಿರಿಸಿಕೊಂಡು ಅಲ್ ಖೈದಾ ಸಂಘಟನೆಯ ಉಗ್ರರು ದಾಳಿ ನಡೆಸುವ ಕುರಿತು ವಿದೇಶಾಂಗ ಸಚಿವಾಲಯ ಎಚ್ಚರಿಕೆ ರವಾನಿಸಿರುವ ಹಿನ್ನಲೆಯಲ್ಲಿ, ಪಾಕಿಸ್ತಾನದಲ್ಲಿರುವ ತನ್ನ ಎಲ್ಲ ಪ್ರಜೆಗಳು ಮತ್ತು ರಾಯಭಾರ ಕಚೇರಿಯ ಅಧಿಕಾರಿಗಳು ವಾಪಸ್ ಬರುವಂತೆ ಶ್ವೇತಭವನ ಎಚ್ಚರಿಕೆ ರವಾನಿಸಿದೆ.

ಇದೇ ವೇಳೆ ಮುಸ್ಲಿಂ ರಾಷ್ಟ್ರಗಳಲ್ಲಿ ತನ್ನ ರಾಯಭಾರ ಕಚೇರಿ ಮುಚ್ಚಿರುವುದಕ್ಕೂ, ಪಾಕಿಸ್ತಾನದ ರಾಯಭಾರ ಕಚೇರಿಯಲ್ಲಿರುವ ಅಮೇರಿಕ ಸರ್ಕಾರಿ ನೌಕರರು ಮತ್ತು ನಾಗರೀಕರನ್ನು ವಾಪಸ್ ಕರೆಸಿಕೊಳ್ಳತ್ತಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ಇದೊಂದು ಮುಂಜಾಗ್ರತಾ ಕ್ರಮವಾಗಿದ್ದು, ನಾಗರೀಕರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಅಮೆರಿಕ ಮತ್ತು ಅದರ ಮಿತ್ರ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಅಲ್ ಖೈದಾ ಮತ್ತು ಅದರ ಉಪ ಉಗ್ರ ಸಂಘಟನೆಗಳು ದಾಳಿ ನಡೆಸುವ ಕುರಿತು ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದರ ಹಿನ್ನಲೆಯಲ್ಲಿ, ಅಮೇರಿಕ ಮತ್ತು ಬ್ರಿಟನ್ ದೇಶಗಳು ಮಧ್ಯ ಪ್ರಾಚ್ಯ ಮತ್ತು ಆಫ್ರಿಕಾ ದೇಶದಲ್ಲಿರುವ ತನ್ನ ಎಲ್ಲ ರಾಯಭಾರ ಕಚೇರಿಗಳನ್ನು ಕಳೆದ ವಾರ ಮುಚ್ಚಲು ಸೂಚನೆ ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.