ಆಂಧ್ರ ವಿಭಜನೆ: ಸಂಸದ ಸ್ಥಾನಕ್ಕೆ ಜಗನ್ ರಾಜಿನಾಮೆ

ಹೈದರಾಬಾದ್: ಆಂಧ್ರ ಪ್ರದೇಶ ವಿಭಜನೆಯನ್ನು ಖಂಡಿಸಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದ ಜಗನ್ ಮೋಹನ್ ರೆಡ್ಡಿ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಆಂಧ್ರ ಪ್ರದೇಶದಲ್ಲಿ ನಡೆಯುತ್ತಿರುವ ಸಮೈಕ್ಯ ಆಂಧ್ರ ಪ್ರತಿಭಟನೆಗೆ ದಿನಕಳೆದಂತೆ ಭಾರಿ ಬೆಂಬಲ ಪಡೆಯುತ್ತಿದ್ದು, ಇದೀಗ ಆಂಧ್ರ ಪ್ರದೇಶ ವಿಭಜನೆಯನ್ನು ಖಂಡಿಸಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸ್ಥಾಪಕ ಮತ್ತು ಪುಲಿವೆಂದುಲ ಲೋಕಸಭಾ ಕ್ಷೇತ್ರದ ಸಂಸದ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಂಸದ ಜಗನ್ರೊಂದಿಗೆ ಅವರ ತಾಯಿ ಮತ್ತು ಕಡಪ ಕ್ಷೇತ್ರದ ಶಾಸಕಿ ವೈ.ಎಸ್.ವಿಜಯಲಕ್ಷ್ಮಿ ಅವರು ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಮೂಲಕ ಅಧಿಕೃತವಾಗಿ ಸಮೈಕ್ಯ ಆಂಧ್ರ ಹೋರಾಟವನ್ನು ಜಗನ್ ಮೋಹನ್ ರೆಡ್ಡಿ ಅವರು ಬೆಂಬಲಿಸಲಿದ್ದಾರೆ. ಪ್ರಸ್ತುತ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳ ವಿಚಾರಣೆ ಎದುರಿಸುತ್ತಿರುವ ಜಗನ್ ಅವರು ಹೈದರಾಬಾದಿನ ಚಂಚಲಗೂಡ ಜೈಲಿನಲ್ಲಿದ್ದು, ಅಲ್ಲಿಂದಲೇ ತಮ್ಮ ರಾಜಿನಾಮೆ ನಿರ್ಧಾರವನ್ನು ಪ್ರಕಟಸಲಿದ್ದಾರೆ ಎಂದು ತಿಳಿದುಬಂದಿದೆ.
ಗೂರ್ಖಾಲ್ಯಾಂಡ್ ಮುಷ್ಕರ ಅಂತ್ಯಕ್ಕೆ ದೀದಿ ಗಡುವು
ಒಂದೆಡೆ ತೆಲಂಗಾಣ ರಾಜ್ಯ ರಚನೆಯನ್ನು ವಿರೋಧಿಸಿ ಆಂಧ್ರಪ್ರದೇಶದಲ್ಲಿ ಭಾರಿ ಹೋರಾಟ ನಡೆಯುತ್ತಿದ್ದರೆ, ಇತ್ತ ಪಶ್ಚಿಮ ಬಂಗಾಳದಲ್ಲಿ ಕೂಡ ಗೂರ್ಖಾಲ್ಯಾಂಡ್ ಪ್ರತ್ಯೇಕ ರಾಜ್ಯ ರಚನೆಗಾಗಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪ.ಬಂಗಾಳದ ಪೊಲೀಸರು ಹರಸಾಹಸ ಪಡುತ್ತಿರುವ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಠಿಣ ನಿರ್ಧಾರ ಕೈಗೊಳ್ಳುವ ಸೂಚನೆ ನೀಡಿದ್ದಾರೆ. ಇಂದು ಮುಷ್ಕರ ನಿರತರನ್ನು ಉದ್ದೇಶಿಸಿ ಮಾಧ್ಯಮಗಳಲ್ಲಿ ಮಾತನಾಡಿರುವ ಅವರು ಪ್ರತಿಭಟನಾಕಾರರಿಗೆ 72 ಗಂಟೆಗಳ ಗಡುವು ನೀಡಿದ್ದಾರೆ. ಅಲ್ಲದೆ 72 ಗಂಟೆಗಳ ನಂತರವೂ ಪ್ರತಿಭಟನೆ ನಡೆದರೆ ಮುಂದಾಗುವ ಪರಿಣಾಮಕ್ಕೆ ಪ್ರತಿಭಟನಾಕಾರರೇ ಕಾರಣರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


