ಈಗಿನ ಸುದ್ದಿ

ಖೇಮ್ಕಾ ವರದಿ: ಮತ್ತೆ ಸಂಕಷ್ಟದಲ್ಲಿ ಸೋನಿಯಾ ಅಳಿಯ

ಖೇಮ್ಕಾ ವರದಿ: ಮತ್ತೆ ಸಂಕಷ್ಟದಲ್ಲಿ ಸೋನಿಯಾ ಅಳಿಯ
Published On :

ಗುರುಗಾಂವ್: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ನಕಲಿ ದಾಖಲೆ ನೀಡಿ ಅಕ್ರಮವಾಗಿ ಭೂಮಿ ಪರಭಾರೆ ಮಾಡಿದ್ದಾರೆ ಎಂಬುದಾಗಿ ಹಿರಿಯ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ ವರದಿ ನೀಡಿದ್ದಾರೆ.

ಭಾರಿ ಚರ್ಚೆಗೆ ಗ್ರಾಸವಾಗಿದ್ದ ರಾಬರ್ಟ್ ವಾದ್ರಾ ಮತ್ತು ಡಿಎಲ್‌ಎಫ್ ಸಂಸ್ಥೆಯ ನಡುವಿನ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ ಅವರು ಹರ್ಯಾಣ ಸರ್ಕಾರಕ್ಕೆ ತಮ್ಮ ವರದಿ ನೀಡಿದ್ದು, 100 ಪುಟಗಳ ಈ ವರದಿಯಲ್ಲಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರ ಭೂಮಿ ಪರಭಾರೆ ಅಕ್ರಮವಾಗಿದೆ ಎಂದು ಸ್ಪಷ್ಟವಾಗಿ ಹೇಳಲಾಗಿದೆ.

ಗುರುಗಾಂವ್‌ನ ಶಿಖೋಪುರ ಬಳಿಯ 3.5 ಎಕರೆ ಸರ್ಕಾರಿ ಭೂಮಿಯನ್ನು ನಕಲಿ ದಾಖಲೆ ನೀಡಿ ವಾದ್ರಾ ಪಡೆದಿದ್ದರು. ನಂತರ ಇದೇ ಭೂಮಿಯನ್ನು ಅವರು ಡಿಎಲ್‌ಎಫ್ ಸಂಸ್ಥೆಗೆ 58 ಕೋಟಿ ರುಪಾಯಿಗಳಿಗೆ ಮಾರಿದ್ದಾರೆ ಎಂದು ಖೇಮ್ಕಾ ಅವರು ತಮ್ಮ ವರದಿ ನೀಡಿದ್ದಾರೆ. ಈ ಮೂಲಕ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.