ಈಗಿನ ಸುದ್ದಿ

ವಿಶ್ವ ಬ್ಯಾಡ್ಮಿಂಟನ್: ಸೆಮಿಫೈನಲ್‌ನಲ್ಲಿ ಸೋಲು; ಸಿಂಧುಗೆ ಕಂಚು

ವಿಶ್ವ ಬ್ಯಾಡ್ಮಿಂಟನ್: ಸೆಮಿಫೈನಲ್‌ನಲ್ಲಿ ಸೋಲು; ಸಿಂಧುಗೆ ಕಂಚು
Published On :

ಗಾಂಗ್ಚೌ: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಸೆಮಿಫೈನಲ್‌ನಲ್ಲಿ ಭಾರತದ ಆಟಗಾರ್ತಿ ಪಿ.ವಿ. ಸಿಂಧು ಸೋಲನುಭವಿಸಿದ್ದು, ಕಂಚಿನ ಪದಕಕ್ಕೆ ತೃಪ್ತಿ ಪಡಬೇಕಾಯಿತು.

ಚೀನಾದ ಗ್ಯಾಂಗ್‌ಜೌನಲ್ಲಿ ಇಂದು ನಡೆದ ಮಹಿಳೆಯರ ಸಿಂಗಲ್ಸ್ ಸೆಮಿಫೈನಲ್ ಪಂದ್ಯದಲ್ಲಿ ಥಾಯ್ಲೆಂಡ್‌ನ ರೆಚನಕೊ ವಿರುದ್ಧ 10-21, 13-21 ನೇರ ಸೆಟ್‌ಗಳಿಂದ ಪರಾಭವಗೊಂಡರು. ಇದರೊಂದಿಗೆ ವಿಶ್ವ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸಿಂಧು ಅವರ ಚಿನ್ನದ ಪದಕ ಗೆಲ್ಲುವ ಕನಸು ನನಸಾಗಲಿಲ್ಲ.

ಆರಂಭದಿಂದಲು ಥಾಯ್ಲೆಂಡ್‌ನ ರೆಚನಕೊ ಅವರು ಪಂದ್ಯದ ಮೇಲೆ ತಮ್ಮ ಹಿಡಿತ ಸಾಧಿಸಿದ್ದರು. ಹೀಗಾಗಿ ರೆಚನಕೊ ಅವರನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಲ್ಲಿಲ್ಲ. ಸಿಂಧು ಸೋಲಿನೊಂದಿಗೆ ವಿಶ್ವ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತಕ್ಕೆ ಪ್ರಥಮ ಕಂಚು ಸಿಕ್ಕಿದೆ.

ನಿನ್ನೆ ಕ್ವಾಟರ್‌ಫೈನಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಸೆಮಿಫೈನಲ್‌ಗೆ ಪ್ರವೇಶಿಸಿದ್ದ ಸಿಂಧು ಅವರು, ಸೆಮಿಫೈನಲ್‌ನಲ್ಲಿ ಗೆಲ್ಲುವ ಭರವಸೆ ಮೂಡಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.