ಕಿಶ್ತ್ವಾರ್ ಹಿಂಸಾಚಾರ: ಶಾಂತಿ ಕಾಪಾಡುವಂತೆ ಸಿಎಂ ಮನವಿ
ಶ್ರೀನಗರ: ಜಮ್ಮು ಕಾಶ್ಮೀರದ ಕಿಶ್ತ್ವಾರ್ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಇನ್ನು ನಿಯಂತ್ರಣಕ್ಕೆಬರದ ಕಾರಣ ಕರ್ಫ್ಯೂಮುಂದುವರೆದಿದ್ದು, ಶಾಂತಿ ಕಾಪಾಡುವಂತೆ ಜನತೆಯಲ್ಲಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಭಾನುವಾರ ಮನವಿ ಮಾಡಿದ್ದಾರೆ.
ಕಿಶ್ತ್ವಾರನಲ್ಲಿ ಸಂಭವಿಸಿದ ಹಿಂಸಾಚಾರ ಹತೋಟಿಗೆ ಬರದ ಕಾರಣ ಶಾಂತಿ ಪುನಃ ಸ್ಥಾಪಿಸಲು ಮುಂದಾಗಿರುವ ಸಿಎಂ, ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ ಜನತೆ ಸುಳ್ಳು ವದಂತಿಗಳಿಗೆ ಸ್ಪಂಧಿಸಿ ಹಿಂಸಾಚಾರಕ್ಕೆ ಇಳಿಯಬಾರದು ಎಂದರು. ಜನತೆ ಹಿಂಸಾಚಾರಕ್ಕೆ ತಿರುಗಿದರೆ ಇದನ್ನೇ ರಾಜಕೀಯವಾಗಿ ಬಳಸಿಕೊಳ್ಳುವ ಸಾಧ್ಯತೆಗಳಿವೆ. ಹೀಗಾಗಿ ರಾಜಕೀಯ ಕುತಂತ್ರಕ್ಕೆ ಒಳಗಾಗಬಾರದು ಎಂದು ಜನತೆಯಲ್ಲಿ ಸಿಎಂ ಮನವಿ ಮಾಡಿದರು.
ಕಿಶ್ತ್ವಾರ್ನಲ್ಲಿ ಉಂಟಾದ ಹಿಂಸಾಚಾರದಿಂದಾಗಿ ಜಮ್ಮು ಸರ್ಕಾರ ಕರ್ಫ್ಯೂ ವಿಧಿಸಿತ್ತು. ಹಿಂಸಾಚಾರ ನಿಯಂತ್ರಣಕ್ಕೆ ಬರದ ಕಾರಣ ಜಮ್ಮುವಿನ ಉದಂಪುರ, ಕಥುವಾ, ಸಾಂಬಾ, ಬಂದಾರ್ವದಲ್ಲಿ ಕರ್ಫ್ಯೂ ಮುಂದುವರೆದಿದೆ.
ರಂಜಾನ್ ಪ್ರಯುಕ್ತ ಕಿಶ್ತ್ವಾರ್ ಜಿಲ್ಲೆಯ ಖುಲೀದ್ ಪ್ರಾಂತ್ಯದಲ್ಲಿ ನಡೆದ ಪವಿತ್ರ ಪ್ರಾರ್ಥನೆಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಪರಸ್ಪರ ಕಲ್ಲು ತೂರಾಟದಲ್ಲಿ ತೊಡಗಿದ್ದರು. ಈ ವೇಳೆ ಸುಮಾರು 10ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದ್ದು, ಯುವಕರು ಪರಸ್ಪರ ಗುಂಡಿನ ದಾಳಿ ನಡೆಸಿದ್ದರು.
ಗುಂಪು ಘರ್ಷಣೆಯಿಂದಾಗಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದು, ಸುಮಾರು 15 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

