ಈಗಿನ ಸುದ್ದಿ

ಪರಿಸ್ಥಿತಿಯ ಲಾಭ ಪಡೆಯಬೇಡಿ: ಬಿಜೆಪಿ ವಿರುದ್ಧ ಓಮರ್ ವಾಗ್ದಾಳಿ

ಪರಿಸ್ಥಿತಿಯ ಲಾಭ ಪಡೆಯಬೇಡಿ: ಬಿಜೆಪಿ ವಿರುದ್ಧ ಓಮರ್ ವಾಗ್ದಾಳಿ
Published On :

ಶ್ರೀನಗರ: ಲೋಕಸಭಾ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಜಮ್ಮು ಕಾಶ್ಮೀರದ ಕಿಶ್ತ್‌ವಾರ್‌ನ ಹಿಂಸಾಚಾರವನ್ನು ಮತ್ತಷ್ಟು ಉದ್ರಿಕ್ತಗೊಳಿಸಿ ಪರಿಸ್ಥಿತಿಯ ಲಾಭ ಪಡೆಯಲು ಬಿಜೆಪಿ ಹವಣಿಸುತ್ತಿದೆ ಎಂದು ಭಾನುವಾರ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಕಿಡಿಕಾರಿದರು.

ರಂಜಾನ್ ಪ್ರಯುಕ್ತ ಶುಕ್ರವಾರ ಕಿಶ್ತ್‌ವಾರ್‌ನಲ್ಲಿ ನಡೆದ ಪ್ರಾರ್ಥನಾ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಪು ಘರ್ಷಣೆ ವಿಕೋಪಕ್ಕೆ ತಿರುಗಿದ್ದು, ಈ ಸಂದರ್ಭದ ಲಾಭ ಪಡೆಯಲು ಬಿಜೆಪಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಸಿಎಂ ಕಿಡಿಕಾರಿದರು. ಅಲ್ಲದೆ ಹಿಂಸಾಚಾರಕ್ಕೆ ಒಳಗಾಗಿರುವ ಸ್ಥಳಗಳಿಗೆ ರಾಜಕಾರಣಿಗಳು ಭೇಟಿ ನೀಡದಂತೆ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.

ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಹಾಗೂ ಹಿಂಸಾಚಾರದಲ್ಲಿ ತೊಡಗಿಕೊಂಡಿರುವವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. ಅಲ್ಲದೆ ಗಾಳಿ ಸುದ್ದಿಗಳಿಗೆ ಜನರು ಕಿವಿ ಕೊಡಬಾರದು. ಶಾಂತಿ ಕಾಪಾಡಲು ಜನತೆ ಸಹಕರಿಸಬೇಕು ಎಂದು ಜನತೆಯಲ್ಲಿ ಮನವಿ ಮಾಡಿದರು.

ಇಂದು ಬಿಜೆಪಿ ಹಿರಿಯ ನಾಯಕ ಹಾಗೂ ರಾಜ್ಯಸಭಾ ವಿಪಕ್ಷ ನಾಯಕ ಅರುಣ್ ಜೇಟ್ಲಿ ಅವರು ಹಿಂಸಾಚಾರ ಪೀಡಿತ ಕಿಶ್ತ್‌ವಾರ ಪರಿಸ್ಥಿತಿಯನ್ನು ಅವಲೋಕಿಸಲು ತಮ್ಮ ಬೆಂಬಲಿಗರ ಜತೆ ಕಥುವಾ ಜಿಲ್ಲೆಗೆ ಪ್ರವೇಶಿಸಲು ಪ್ರಯತ್ನಿಸಿದಾಗ ಮಾರ್ಗ ಮಧ್ಯೆ ಅವರನ್ನು ಬಂಧಿಸಲಾಯಿತು ಎಂದು ತಿಳಿಸಿದರು.

ಇದೇ ವೇಳೆ, ಲೋಕಸಭೆ ವಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ಅವರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿದ್ದು, ತಮ್ಮ ಬೆಂಬಲಿಗರನ್ನು ಪರಿಸ್ಥಿತಿಯನ್ನು ಮತ್ತಷ್ಟು ಉದ್ರಿಕ್ತಗೊಳಿಸದಂತೆ ಸೂಚಿಸಬೇಕು ಎಂದು ಮನವಿ ಮಾಡಿರುವುದಾಗಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.