ಈಗಿನ ಸುದ್ದಿ

ಒಂದೇ ಹಾರಕ್ಕೆ ಕೊರಳೊಡ್ಡಿದ ಬದ್ಧ ವೈರಿಗಳು!

ಒಂದೇ ಹಾರಕ್ಕೆ ಕೊರಳೊಡ್ಡಿದ ಬದ್ಧ ವೈರಿಗಳು!
Published On :

ಮೈಸೂರು: ಕಳೆದ ಆರು ವರ್ಷಗಳಿಂದ ಬದ್ಧ ವೈರಿಗಳಾಗಿದ್ದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ರಾಜಕೀಯದಲ್ಲಿ ಯಾರೂ ಶಾಶ್ವತ ವೈರಿಗಳಲ್ಲ, ಯಾರೂ ಶಾಶ್ವತ ಮಿತ್ರರಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.

ಸಾಮಾನ್ಯವಾಗಿ ಒಂದೇ ವೇದಿಕೆಯಲ್ಲಿ ಇಬ್ಬರು ನಾಯಕರು ಕಾಣಿಸಿಕೊಂಡಿದ್ದು ತೀರಾ ಕಡಿಮೆ. ಒಂದು ವೇಳೆ ಕಾಣಿಸಿಕೊಂಡರು ಇಬ್ಬರೂ ಮುಖಾಮುಖಿಯಾಗುತ್ತಿರಲಿಲ್ಲ. ಆದರೆ ಇಂದು ಮೈಸೂರಿನಲ್ಲಿ ನಡೆದ ಕಲ್ಯಾಣಮಂಟಪ ಉದ್ಘಾಟನಾ ಕಾರ್ಯಕ್ರಮದಲ್ಲ್ಲಿ ಇಬ್ಬರು ಮಾಜಿ ಸಿಎಂಗಳು ಮುಗುಳ್ನಗುತ್ತಲೇ ಭಾಗವಹಿಸಿದರು. ಅಲ್ಲದೇ ಒಂದೇ ಹಾರಕ್ಕೆ ಇಬ್ಬರೂ ಕೊರಳೊಡ್ಡುವ ಮೂಲಕ ಅಚ್ಚರಿ ಮೂಡಿಸಿದರು.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರಲ್ಲ. ಆಗಸ್ಟ್ ನಂತರ ಮೈತ್ರಿ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಇನ್ನು ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಇದು ಮೈತ್ರಿಯ ಸೂಚನೆಯಲ್ಲ. ಶತ್ರುತ್ವ ಅನ್ನೊದು ಶಾಶ್ವತ ಅಲ್ಲ. ಮುಂದೇ ಏನಾಗುತ್ತದೆ ಎಂಬುದುನ್ನು ಕಾದು ನೋಡಿ ಎಂದು ಮಾರ್ಮಿಕವಾಗಿ ಉತ್ತರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.