ಚಾಂಡಿ ರಾಜಿನಾಮೆಗೆ ಪಟ್ಟು: ಕೇರಳ ರಾಜಧಾನಿ ಸ್ಥಬ್ಧ
ತಿರುವನಂತಪುರ: ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ರಾಜಿನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ರಾಜಧಾನಿ ತಿರುವನಂತಪುರ ಸ್ಥಬ್ಧವಾಗಿದೆ.
ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿ ಎಲ್ಡಿಎಫ್ ರಾಜಧಾನಿ ತಿರುವನಂತಪುರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡಿದೆ. ಅಲ್ಲದೆ ಕೇರಳ ವಿಧಾನಸೌಧಕ್ಕೆ ಮುತ್ತಿಗೆ ಹಾಕಿರುವ ಎಲ್ಡಿಎಫ್ ಕಾಯಕರ್ತರು ಯಾವೊಬ್ಬ ಸಚಿವರು ಕೂಡ ಹೊರ ಬರದಂತೆ ಮತ್ತು ಹೊರಗಿನಿಂದ ಒಳಹೋಗದಂತೆ ತಡೆದು ಎಲ್ಲ ಗೇಟ್ಗಳನ್ನು ಬಂದ್ ಮಾಡಿದ್ದಾರೆ.
ಎಲ್ಡಿಎಫ್ ಹಮ್ಮಿಕೊಂಡಿರುವ ಈ ಪ್ರತಿಭಟನೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಸಿಪಿಐ(ಎಂ) ಮುಖ್ಯಸ್ಥ ಪ್ರಕಾಶ್ ಕಾರಟ್ ಸೇರಿದಂತೆ ಎಲ್ಡಿಎಫ್ನ ಸುಮಾರು 1 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ರಾಜಿನಾಮೆ ನೀಡುವವರೆಗೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಎಲ್ಡಿಎಫ್ ನಾಯಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಈ ನಡುವೆ ಎಲ್ಡಿಎಫ್ನ ಪ್ರತಿಭಟನಾ ಬಿಸಿಗೆ ಸಿಲುಕಿರುವ ಕೇರಳ ಸರ್ಕಾರ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಇಂಡೋ-ಟಿಬೆಟಿಯನ್ ಸೈನಿಕರನ್ನು ನೇಮಿಸಿದ್ದಾರೆ.
ಕೇರಳ ರಾಜ್ಯದ ಮಟ್ಟಿಗೆ ಅತಿದೊಡ್ಡ ಭ್ರಷ್ಟಾಚಾರ ಹಗರಣವೆಂದೇ ಹೇಳಲಾಗುತ್ತಿರುವ ಸೋಲಾರ್ ಹಗರಣದಲ್ಲಿ ಸ್ವತಃ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ಹಸ್ತಕ್ಷೇಪವಿದ್ದು, ಕೂಡಲೇ ಅವರು ಹಗರಣದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

