ಈಗಿನ ಸುದ್ದಿ

ಮಾಜಿ ಶಾಸಕ ಎಂ.ಶ್ರೀನಿವಾಸ್ ಬಿಜೆಪಿಗೆ ಗುಡ್‌ಬೈ

Published On :

ಬೆಂಗಳೂರು: ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಶಾಸಕ ಎಂ.ಶ್ರೀನಿವಾಸ್ ಅವರು ಬಿಜೆಪಿಗೆ ಗುಡ್‌ಬೈ ಹೇಳಲು ನಿರ್ಧರಿಸಿದ್ದಾರೆ.

ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಇಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಶ್ರೀನಿವಾಸ್ ಅವರು, ಇನ್ನು ಎರಡ್ಮೂರು ದಿನದಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವುದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಅಲ್ಲದೆ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಏಕೆ ಕಣಕ್ಕಿಳಿಸಿಲ್ಲ ಎಂದು ವರಿಷ್ಠರನ್ನು ಪ್ರಶ್ನಿಸಿದ್ದಾರೆ.

ಚುನಾವಣಾ ಕಣದಿಂದ ಅಭ್ಯರ್ಥಿಯನ್ನು ಹಿಂಪಡೆದಿರುವುದು ರಾಷ್ಟ್ರೀಯ ಪಕ್ಷಕ್ಕೆ ಅವಮಾನವಾಗಿದೆ. ಹೀಗಾಗಿ ತಮಗೆ ಪಕ್ಷದಲ್ಲಿರಲು ಮನಸ್ಸಾಗುತ್ತಿಲ್ಲ ಎಂದು ಶ್ರೀನಿವಾಸ್ ಅವರು ಹೇಳಿದ್ದಾರೆ.

ಇ0ದೇ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಅಶೋಕ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ಶ್ರೀನಿವಾಸ್, ಜೆಡಿಎಸ್ ಜೊತೆ ಈ ಇಬ್ಬರಿಂದ ಒಳ ಒಪ್ಪಂದವಾಗಿದೆ. ಅನಂತ್, ಅಶೋಕ್ ಹಿತಕ್ಕಾಗಿ ಪಕ್ಷವನ್ನು ಬಲಿ ಕೊಡಲಾಗಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.