ತೆಲಂಗಾಣಗೆ ವಿರೋಧ: ಸರ್ಕಾರಿ ಬಸ್ ಸೇವೆ ಸ್ಥಗಿತ
ಹೈದರಾಬಾದ್: ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯನ್ನು ವಿರೋಧಿಸಿ ಆಂಧ್ರ ಪ್ರದೇಶ ಸರ್ಕಾರಿ ಸಾರಿಗೆ ಸಂಸ್ಥೆ(ಎಪಿಎಸ್ಆರ್ಟಿಸಿ)ಯ ನೌಕರರು ಬಸ್ ಸೇವೆಯನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದಾರೆ.
ಅಖಂಡ ಆಂಧ್ರಪ್ರದೇಶವನ್ನು ಬೆಂಬಲಿಸಿ ಸೀಮಾಂಧ್ರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿ ಆಂಧ್ರ ಪ್ರದೇಶ ಸರ್ಕಾರಿ ಸಾರಿಗೆ ನೌಕರರು ಬಸ್ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ. ಸಾರಿಗೆ ನೌಕರರ ಪ್ರತಿಭಟನೆಯಿಂದಾಗಿ ಆಂಧ್ರಪ್ರದೇಶದಾದ್ಯಂತ ಸಂಚಾರ ಅಸ್ತವ್ಯಸ್ಥಗೊಂಡಿದ್ದು, ಪ್ರಮುಖ ಧಾರ್ಮಿಕ ಕ್ಷೇತ್ರ ತಿರುಪತಿ-ತಿರುಮಲದಲ್ಲಿ ಸಾರಿಗೆ ಸೇವೆ ಇಲ್ಲದೆ ಪ್ರಯಾಣಿಕರು ಪರದಾಡುತ್ತಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಎಲ್ಲ ಬಸ್ಗಳ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ನೌಕರರು ಮುಷ್ಕರದಲ್ಲಿ ನಿರತರಾಗಿದ್ದಾರೆ. ನೌಕರರ ಮುಷ್ಕರದಿಂದಾಗಿ ತಿರುಮಲದಲ್ಲಿ ಭಕ್ತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಅಲ್ಲದೆ ತಿರುಮಲ ದೇವಸ್ಥಾನದ ಸಿಬ್ಬಂದಿಗಳು ಕೂಡ ಮುಷ್ಕರಕ್ಕೆ ಬೆಂಬಲ ನೀಡಿದ್ದು, ಟಿಟಿಡಿಯ ಒಟ್ಟು 13000 ಸಾವಿರ ಸಿಬ್ಬಂದಿಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಹೀಗಾಗಿ ದೇಶಾದ್ಯಂತ ಇರುವ ಟಿಟಿಡಿ ಕಚೇರಿಗಳ ಸೇವೆ ಸ್ಥಗಿತಗೊಂಡಿದೆ.
ಆದರೆ ತಿರುಮಲದಲ್ಲಿರುವ ದೇವಸ್ಥಾನದ ಸಿಬ್ಬಂದಿಗಳು ಮಾತ್ರ ಮುಷ್ಕರದಲ್ಲಿ ಪಾಲ್ಗೊಂಡಿಲ್ಲ. ಮತ್ತೊಂದೆಡೆ ತೆಲಂಗಾಣ ವಿರೋಧಿ ಹೋರಾಟಕ್ಕೆ ಸೀಮಾಂಧ್ರದ ಸ್ಥಳೀಯ ಕೇಬಲ್ ಆಪರೇಟರ್ಗಳು ಧುಮುಕಿದ್ದು, ಆಂಧ್ರಪ್ರದೇಶದಾದ್ಯಂತ ಮನರಂಜನಾ ವಾಹಿನಿಗಳನ್ನು ಸ್ಥಗಿತಗೊಳಿಸಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

