ಈಗಿನ ಸುದ್ದಿ

ವಾದ್ರಾ ಭೂಹಗರಣ: ಎಸ್‌ಐಟಿ ತನಿಖೆಗೆ ಬಿಜೆಪಿ ಆಗ್ರಹ

ವಾದ್ರಾ ಭೂಹಗರಣ: ಎಸ್‌ಐಟಿ ತನಿಖೆಗೆ ಬಿಜೆಪಿ ಆಗ್ರಹ
Published On :

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರ ಭೂ ಹಗರಣ ಮಂಗಳವಾರ ಸಂಸತ್ತಿನ ಉಭಯ ಸದನಗಳಲ್ಲೂ ಕೋಲಾಹಲವೆಬ್ಬಿಸಿದ್ದು, ಲೋಕಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.

ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯರು, ವಾದ್ರಾ ವಿರುದ್ಧ ಘೋಷಣೆಗಳನ್ನು ಕೂಗಿ, ಪ್ರತಿಭಟನೆ ನಡೆಸಿದರು. ಪ್ರತಿಪಕ್ಷಗಳ ತೀವ್ರ ಗದ್ದಲದಿಂದಾಗಿ ರಾಜ್ಯಸಭಾ ಅಧ್ಯಕ್ಷ ಹಮಿದ್ ಅನ್ಸಾರಿ ಅವರು ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.

ಇನ್ನು ಲೋಕಸಭೆಯಲ್ಲೂ ವಾದ್ರಾ ಭೂ ಹಗರಣ, ಕಿಶ್ತ್‌ವಾರ್ ಕೋಮು ಗಲಭೆ ಹಾಗೂ ತೆಲಂಗಾಣ ವಿರೋಧಿ ಪ್ರತಿಭಟನೆಯನ್ನು ಪ್ರತಿಪಕ್ಷಗಳು ಪ್ರಸ್ತಾಪಿಸಿದವು.

ವಿಶೇಷ ತನಿಖಾ ತಂಡದಿಂದ(ಎಸ್‌ಐಟಿ) ರಾಬರ್ಟ್ ವಾದ್ರಾ ಅವರ ಭೂ ಹಗರಣದ ಕುರಿತು ತನಿಖೆಯಾಗಬೇಕು ಎಂದು ಬಿಜೆಪಿಯ ಯಶವಂತ್ ಸಿನ್ಹಾ ಅವರು ಆಗ್ರಹಿಸಿದರು. ಅಲ್ಲದೆ ವಾದ್ರಾ ಅವರು ಹರ್ಯಾಣದಲ್ಲಿ ಮಾತ್ರ ಅಕ್ರಮ ಎಸಗಿಲ್ಲ. ಕಾಂಗ್ರೆಸ್ ಸರ್ಕಾರ ಇರುವ ಎಲ್ಲ ರಾಜ್ಯಗಳಲ್ಲೂ ಭೂ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ವಾದ್ರಾ ಅವರ ಭೂಹಗರಣದ ನೈತಿಕ ಹೊಣೆ ಹೊರಬೇಕು ಮತ್ತು ಈ ಬಗ್ಗೆ ಅವರೇ ಸಂಸತ್ತಿಗೆ ಉತ್ತರ ನೀಡಬೇಕು ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.