ವಿವಿಐಪಿ ಕಾಪ್ಟರ್ ಹಗರಣ: ಸಂಸತ್ತನಲ್ಲಿ ಸಿಎಜಿ ವರದಿ ಮಂಡನೆ

ನವದೆಹಲಿ: ಬಹುಕೋಟಿ ವಿವಿಐಪಿ ಕಾಪ್ಟರ್ ಹಗರಣ ಕುರಿತು ನಿಯಂತ್ರಕ ಮತ್ತು ಮಹಾ ಲೆಕ್ಕಪರಿಶೋಧಕ(ಸಿಎಜಿ)ರ ವರದಿಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಾಗಿದೆ.
ವಿವಿಐಪಿ ಕಾಪ್ಟರ್ ಖರೀದಿಗೆ ಸಂಬಂಧಿಸಿದಂತೆ ಅಗಸ್ಟಾ-ವೆಸ್ಟಲ್ಯಾಂಡ್ ನಡುವೆ ನಡೆದ ಒಪ್ಪಂದದಲ್ಲಿ ಅಕ್ರಮ ನಡೆದಿದೆ ಎಂದು ಸಿಎಜಿ ವರದಿ ಹೇಳಿದೆ. ಅಗಸ್ಟಾ-ವೆಸ್ಟ್‌ಲ್ಯಾಂಡ್ ಸಂಸ್ಥೆಯೊಂದಿಗಿನ ಒಪ್ಪಂದದ ಅಸಲಿ ಮೊತ್ತಕ್ಕಿಂತ ಹೆಚ್ಚಿನ ಮೊತ್ತವನ್ನು ಗೃಹ ಇಲಾಖೆ ವ್ಯಹಿಸಿದೆ ಮತ್ತು ಒಪ್ಪಂದದ ವೇಳೆ ನಿಯಮಗಳನ್ನು ಪಾಲಿಸಿಲ್ಲ ಎಂದು ಸಿಎಜಿ ವರದಿಯಲ್ಲಿ ತಿಳಿಸಲಾಗಿದೆ. ಇದರಿಂದಾಗಿ ಕಾಂಗ್ರೆಸ್‌ಗೆ ತೀವ್ರ ಮುಖಭಂಗವಾಗಿದೆ.
ಅಗಸ್ಟಾ-ವೆಸ್ಟ್‌ಲ್ಯಾಂಡ್ ಸಂಸ್ಥೆಯಿಂದ ಕಾಪ್ಟರ್ ಖರೀದಿ ಮಾಡಿದ ನಿಜವಾದ ಬೆಲೆ ಸೇರಿದಂತೆ ಸಿಎಜಿ ವರದಿ ಕಾಪ್ಟರ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಎತ್ತಿದೆ. ಸಂಸ್ಥೆ ಆಹ್ವಾನ ಮಾಡಿದ್ದ ಅಸಲಿ ಬೆಲೆ 3966 ಕೋಟಿ, ಆದರೆ ಒಪ್ಪಂದವಾಗಿರುವುದು 4871 ಕೋಟಿ ಎಂದು ವರದಿಯಲ್ಲಿ ತಿಳಿಸಲಾಗಿದೆ.
3727 ಕೋಟಿ ಮೊತ್ತದ 12 ವಿವಿಐಪಿ ಹೆಲಿಕಾಪ್ಟರ್ ಖರೀದಿ ಒಪ್ಪಂದದ ವೇಳೆ, ಸೇನಾ ಶಸಸ್ತ್ರ ಖರೀದಿ ನಿಯಮ ಹಾಗೂ ಟೆಂಡರ್ ಪ್ರಕ್ರಿಯೆಗಳನ್ನು ಉಲ್ಲಂಘಿಸಲಾಗಿದೆ ಎಂದು ಸಿಎಜೆ ವರದಿ ಸ್ಪಷ್ಟಪಡಿಸಿದೆ.
ವಿವಿಐಪಿ ಕಾಪ್ಟರ್ ಖರೀದಿಯಲ್ಲಿ ಅಕ್ರಮ ನಡೆದಿದ್ದರಿಂದ 2010ರಲ್ಲಿ ಒಪ್ಪಂದವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು. ಈ ಸಂಬಂಧ ಸಿಬಿಐ ಅಧಿಕಾರಿಗಳು ಫಿನ್ಮೇಕ್ನಿಯಾ ಮತ್ತು ಅಗಸ್ಟಾ ವೆಸ್ಟ್‌ಲ್ಯಾಂಡ್‌ನ ಇಬ್ಬರು ಮಾಜಿ ಸಿಇಒ ಅಧಿಕಾರಿಗಳನ್ನು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


