ಈಗಿನ ಸುದ್ದಿ

ಒಳ ನುಸುಳುತ್ತಿದ್ದ 2 ಉಗ್ರರ ಹತ್ಯೆ

Published On :

ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರ್ ಜಿಲ್ಲೆಯ ಕೆರನ್ ಸೆಕ್ಟರ್ ಬಳಿ ಗಡಿಯಲ್ಲಿ ಅಕ್ರಮವಾಗಿ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರರನ್ನು ಭಾರತೀಯ ಸೇನಾ ಪಡೆ  ಹತ್ಯೆ ಮಾಡಿದೆ.

ಕೆರನ್ ಸೆಕ್ಟರ್ ಬಳಿ ಬೆಳಿಗ್ಗೆ 3 ಗಂಟೆಯ ಸಮಯದಲ್ಲಿ ಉಗ್ರರು ಗಡಿಯಲ್ಲಿ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ವೇಳೆ ಭಾರತೀಯ ಸೇನಾ ಪಡೆ ಗುಂಡಿನ ದಾಳಿ ನಡೆಸಿ ಇಬ್ಬರು ಉಗ್ರರರನ್ನು ಹತ್ಯೆಮಾಡಿದ್ದು, ಅಕ್ರಮವಾಗಿ ಗಡಿ ಪ್ರವೇಶಿಸುವ ಉಗ್ರರ ಯತ್ನವನ್ನು ಭಾರತೀಯ ಯೋಧರು ವಿಫಲಗೊಳಿಸಿದ್ದಾರೆ ಎಂದು ಗೃಹ ಇಲಾಖೆಯ ವಕ್ತಾರ ಎಸ್.ಎನ್. ಆಚಾರ್ಯ ಅವರು ತಿಳಿಸಿದ್ದಾರೆ.

ಇದೇ ವೇಳೆ, ಪಾಕಿಸ್ತಾನ ಸೈನಿಕರು ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ 16 ಸೇನಾ ನೆಲೆಗಳ ಹಾಗೂ ಸಾರ್ವಜನಿಕ ಪ್ರದೇಶಗಳ ಮೇಲೆ ಪಾಕಿಸ್ತಾನಿ ಸೈನಿಕರು ನಿನ್ನೆ ರಾತ್ರಿಯಿಂದ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಉಭಯ ದೇಶಗಳ ನಡುವೆ ನಿರಂತರವಾಗಿ ಗುಂಡಿನ ದಾಳಿ ನಡೆಯುತ್ತಿರುವುದಾಗಿ ಆಚಾರ್ಯ ಹೇಳಿದ್ದಾರೆ.

ಕಳೆದ 4 ದಿನಗಳಲ್ಲಿ 9 ಬಾರಿ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಸೈನಿಕರು, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಎಂಬಲ್ಲಿ ನಿನ್ನೆ ರಾತ್ರಿ ಭಾರತೀಯ ಸೇನಾ ನೆಲೆಗಳು ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಉಭಯ ದೇಶಗಳ ನಡುವೆ ಗುಂಡಿನ ಚಕಮಕಿ ನಿರಂತರವಾಗಿ ನಡೆದ್ದಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪೂಂಚ್ ಜಿಲ್ಲೆಯ ಹಮೀರ್ಪುರ್-ಬಾಲ್ಕೋಟೆ ಹಾಗೂ ಮೇಂಧಾರ್ ಗಡಿ ಪ್ರದೇಶಗಳಲ್ಲಿ ಕಳೆದ ರಾತ್ರಿ ಪಾಕಿಸ್ತಾನಿ ಸೈನಿಕರು ಸಣ್ಣ ಪ್ರಮಾಣದ ಫಿರಂಗಿ ಹಾಗೂ ಗಂಟೆಗೆ 2100 ಗುಂಡುಗಳನ್ನು ಸಿಡಿಸುವ ಆರ್ಪಿಜಿಎಸ್ ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ದಾಳಿ ನಡೆಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಸಹ ಪ್ರತಿ ದಾಳಿ ನಡೆಸುತ್ತಿದ್ದಾರೆ ಎಂದು ಆಚಾರ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.