'ಕಿಶ್ತ್ವಾರ್'ನಲ್ಲಿ ಗಾಯಾಗೊಂಡವರಿಗೆ 2 ಲಕ್ಷ ಪರಿಹಾರ ನೀಡಿ: ಸುಪ್ರೀಂ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ನಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ತಲಾ 2 ಲಕ್ಷ ರು. ಪರಿಹಾರ ನೀಡುವಂತೆ ಜಮ್ಮು ಮತ್ತು ಕಾಶ್ಮೀರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ಆದೇಶಿಸಿದೆ.
ಗಾಯಾಳುಗಳ ಪರಿಹಾರದ ವಿರುದ್ಧ ಜಮ್ಮು ಕಾಶ್ಮೀರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಪಿ. ಸದಾಶಿವಂ ಅವರನ್ನೊಳಗೊಂಡ ಪೀಠ, ಫಟನೆಯಲ್ಲಿ ಗಾಯಗೊಂಡವರಿಗೂ ತಲಾ 2 ಲಕ್ಷ ರು. ಪರಿಹಾರ ನೀಡುವಂತೆ ಸೂಚಿಸಿದೆ.
ಹಿಂಸಾಚಾರದಲ್ಲಿ ಗಾಯಗೊಂಡವರಿಗೂ ಪರಿಹಾರ ನೀಡಬೇಕು. ಗಾಯಗೊಂಡವರು ಪರಿಹಾರಕ್ಕೆ ಹಕ್ಕುದಾರರಲ್ಲ ಎಂದು ನೀವು ಹೇಗೆ ಹೇಳುತ್ತಿರಿ? ಎಂದು ಸರ್ಕಾರವನ್ನು ಪ್ರಶ್ನಿಸಿತು. ಇದೇ ವೇಳೆ ಹಿಂಸಾಚಾರದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರು. ಹಾಗೂ ಗಾಯಗೊಂಡವರಿಗೆ ತಲಾ 2 ಲಕ್ಷ ರು. ಕೊಡಬೇಕೆಂದು ನಿನ್ನೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಅಲ್ಲದೆ, ಹಿಂಸಾಚಾರಕ್ಕೆ ಕುರಿತಂತೆ ಸರ್ಕಾರಕ್ಕೆ ಕೆಲವೊಂದು ನಿರ್ದೇಶನಗಳನ್ನು ನೀಡಬೇಕು ಎಂದು ಜಮ್ಮು-ಕಾಶ್ಮೀರದ ನ್ಯಾಷನಲ್ ಪ್ಯಾಂಥರ್ಸ್ ಪಾರ್ಟಿ(ಎನ್ಪಿಪಿ)ಯ ಕಾರ್ಯದರ್ಶಿ ಸಲ್ಲಿಸಿದ ಅರ್ಜಿಯನ್ನು ಸಹ ಕೋರ್ಟ್ ವಜಾಗೊಳಿಸಿದ್ದು, ರಾಜ್ಯಗಳಲ್ಲಿ ನಡೆಯುವ ಆಂತರಿಕ ಗಲಭೆಗಳಿಗೆ ಅಲ್ಲಿನ ಸರ್ಕಾರಗಳೆ ಹೊಣೆ ಹೊತ್ತು ಗಲಭೆಯನ್ನು ತಹಬದಿಗೆ ತರಬೇಕು. ಇದರಲ್ಲಿ ಕೋರ್ಟ್ನ ಪಾತ್ರ ಏನು ಇಲ್ಲ ಎಂದಿದ್ದಾರೆ.
ಕೋಮು ಗಲಭೆಯಂತಹ ಪ್ರಕರಣಗಳಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೊಡಲು ಸಾಧ್ಯವಿಲ್ಲ. ಅಲ್ಲದೆ ಈ ವಿಚಾರದ ಕುರಿತಾಗಿ ಪ್ರತಿದಿನ ವಿಚಾರಣೆಗೆ ತರಬೇಡಿ, ಕೋರ್ಟ್ಗೆ ಇಂದೊಂದೆ ಪ್ರಕರಣ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಕಿಡಿ ಕಾರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


