ಈಗಿನ ಸುದ್ದಿ

ಪಾಕ್ ವಿರುದ್ದ ಸಂಸತ್‌ನಲ್ಲಿ ನಿರ್ಣಯ ಅಂಗೀಕಾರ

ಪಾಕ್ ವಿರುದ್ದ ಸಂಸತ್‌ನಲ್ಲಿ ನಿರ್ಣಯ ಅಂಗೀಕಾರ
Published On :

ನವದೆಹಲಿ: ಪದೇಪದೆ ಕದನ ವಿರಾಮ ಉಲ್ಲಂಘಿಸಿ ಕ್ಯಾತೆ ತೆಗೆಯುತ್ತಿರುವ ಪಾಕಿಸ್ತಾನದ ವಿರುದ್ಧ ಬುಧವಾರ ಸಂಸತ್ತಿನ ಉಭಯ ಸದನಗಳಲ್ಲಿ ಖಂಡನಾ ನಿರ್ಣಯ ಮಂಡಿಸಿ ಅಂಗೀಕರಿಸಲಾಯಿತು.

ಪಾಕ್ ವಿರುದ್ಧದ ಖಂಡನಾ ನಿರ್ಣಯವನ್ನು ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರು ಸದನಕ್ಕೆ ವಿವರಿಸಿದರು. ಪಾಕ್ ವಿರುದ್ಧದ ನಿರ್ಣಯ ಮಂಡಿಸುವ ಮೂಲಕ ಪಾಕಿಸ್ತಾನಕ್ಕೆ ಹಾಗೂ ಅಲ್ಲಿನ ಜನರಿಗೆ ಬೆದರಿಕೆ ಹಾಕುತ್ತಿಲ್ಲ. ಆದರೆ ಭಯೋತ್ಪಾದಕರನ್ನು ಪ್ರೋತ್ಸಾಹಿಸುತ್ತಿರುವ ಪಾಕಿಸ್ತಾನದ ಕ್ರಮದ ವಿರುದ್ಧ ಈ ನಿರ್ಣಯ ಮಂಡಿಸಿಲಾಗಿದೆ ಎಂದರು.

ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ಹೀಗಿರುವಾಗಿ ಜಮ್ಮು ಕಾಶ್ಮೀರದ ಕೆಲವೊಂದು ಭಾಗಗಳನ್ನು ಬಲವಂತವಾಗಿ ಹಾಗೂ ಅಕ್ರಮವಾಗಿ ಆಕ್ರಮಿಸಿಕೊಳ್ಳುವ ಪಾಕ್ ಯತ್ನವನ್ನು ನಿರ್ಣಯ ಮಂಡಿಸುವ ಮೂಲಕ ಖಂಡಿಸಲಾಗಿದೆ.

ಪಾಕಿಸ್ತಾನ ಈ ಕೂಡಲೆ ಗಡಿ ನಿಯಂತ್ರ ರೇಖೆ ಬಳಿ(ಎಲ್‌ಒಸಿ) ಭಾರತೀಯ ಯೋಧರ ವಿರುದ್ಧ ಅಪ್ರಚೋದಿತ ದಾಳಿ ನಡೆಸುವುದನ್ನು ನಿಲ್ಲಿಸಲಿದೆ ಎಂಬ ಭರವಸೆ ಇದೆ.  ಜಮ್ಮು ಕಾಶ್ಮೀರದ ಪೂಂಚ್ ಎಂಬಲ್ಲಿ ಭಾರತೀಯ ಐವರು ಯೋಧರ ಹತ್ಯೆಯನ್ನು ಸಹ ನಿರ್ಣಯದಲ್ಲಿ ಖಂಡಿಸಲಾಗಿದೆ.

ನಿನ್ನೆಯಷ್ಟೆ ಪಾಕಿಸ್ತಾನ ಸಹ ಭಾರತೀಯ ಯೋಧರು ಅಪ್ರಚೋದಿತ ದಾಳಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಷ್ಟ್ರೀಯ ಸಂಸತ್ತಿನಲ್ಲಿ ನಿರ್ಣಯ ಅಂಗೀಕರಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.