ಸಂಸದ ಜಯಪ್ರಕಾಶ್ ಹೆಗ್ಡೆ ಆಪ್ತ ಸಹಾಯಕ ಆತ್ಮಹತ್ಯೆ
ಚಿಕ್ಕಮಗಳೂರು: ಚಿಕ್ಕಮಗಳೂರು ಸಂಸದ ಜಯಪ್ರಕಾಶ್ ಹೆಗ್ಡೆ ಅವರ ಆಪ್ತ ಸಹಾಯಕ ಜಗನ್ನಾಥ್(48) ಅವರು ಬುಧವಾರ ಆತ್ಯಹತ್ಯೆಗೆ ಶರಣಾಗಿದ್ದಾರೆ.
ಜಯಪ್ರಕಾಶ್ ಹೆಗ್ಡೆ ಅವರ ಬಳಿ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಜಗನ್ನಾಥ್ ಅವರು ಇಂದು ಚಿಕ್ಕಮಗಳೂರಿನ ಪ್ರವಾಸಿ ಮಂದಿರದ ಕೊಠಡಿ ಸಂಖ್ಯೆ 4ರಲ್ಲಿ ನೇಣಿಗೆ ಶರಣಾಗಿದ್ದಾರೆ.
ಜಗನ್ನಾಥ್ ಅವರು ನಿನ್ನೆ ರಾತ್ರಿ ಚಿಕ್ಕಮಗಳೂರಿನ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದರು. ಪ್ರವಾಸಿ ಮಂದಿರದ ಕೊಠಡಿ ಸಂಖ್ಯೆ 4ರಲ್ಲಿ ಉಳಿಯಲು ಅವರಿಗೆ ವ್ಯವಸ್ಥೆ ಮಾಡಲಾಗಿತ್ತು. ಆದರೆ ಬೆಳಗ್ಗೆ ಎಷ್ಟು ಹೊತ್ತಾದರೂ ಜಗನ್ನಾಥ್ ಅವರು ಹೊರಬರದ ಹಿನ್ನೆಲೆಯಲ್ಲಿ ಅನುಮಾನಗೊಂಡ ಪ್ರವಾಸಿ ಮಂದಿರದ ಸಿಬ್ಬಂದಿ ಕೊಠಡಿಯ ಬಾಗಿಲು ಮುರಿದು ನೋಡಿದಾಗ, ಅವರು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಜಗನ್ನಾಥ್ ಅವರಿಗೆ ಹಣದ ಮುಗ್ಗಟ್ಟು ಎದುರಾಗಿತ್ತು. ಹೀಗಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅವರ ಕುಟುಂಬದವರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಚಿಕ್ಕಮಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

