ಈಗಿನ ಸುದ್ದಿ

ಸಬ್ ಮೆರಿನ್ ಸ್ಫೋಟ: 18 ಸಾವು, ತನಿಖೆಗೆ ನೌಕಾಪಡೆ ಆದೇಶ

ಸಬ್ ಮೆರಿನ್ ಸ್ಫೋಟ: 18 ಸಾವು, ತನಿಖೆಗೆ ನೌಕಾಪಡೆ ಆದೇಶ
Published On :

ಮುಂಬೈ: ಅತ್ಯಂತ ಬಿಗಿ ಭದ್ರತೆ ಹೊಂದಿರುವ ಭಾರತೀಯ ನೌಕಾಪಡೆಗೆ ಸೇರಿದ ಸಬ್ ಮೆರಿನ್‌ನಲ್ಲಿ ಬುಧವಾರ ಬೆಳಗಿನ ಜಾವ ಸ್ಫೋಟ ಸಂಭವಿಸಿದ್ದು, ಸಬ್ ಮೆರಿನ್‌ನಲ್ಲಿದ್ದ 18 ಸಿಬ್ಬಂದಿ ಮೃತಪಟ್ಟಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಭಾರತೀಯ ನೌಕಾಪಡೆ, ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.

ಇಂದು ಬೆಳಗಿನ ಜಾವ ಐಎನ್‌ಎಸ್ ಸಿಂಧು ರಕ್ಷಕ್ ಎಂಬ ಸಬ್ ಮೆರಿನ್‌ನಲ್ಲಿ ಭಾರೀ ಸ್ಫೋಟ ಸಂಭವಿಸಿ, ನಂತರ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅಕ್ಕಪಕ್ಕದಲ್ಲಿದ್ದ ಎರಡು ಹಡಗುಗಳಿಗೂ ವ್ಯಾಪಿಸಿತ್ತು. ಬೆಳಗ್ಗೆ 4 ಗಂಟೆಯವರೆಗೂ ಕಾರ್ಯಚಾರಣೆ ನಡೆಸಿದ ನೌಕಾಪಡೆ ಮತ್ತು ಮುಂಬೈ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಸಬ್ ಮೆರಿನ್‌ನಲ್ಲಿದ್ದ ಮೂವರು ಅಧಿಕಾರಿಗಳು ಸೇರಿದಂತೆ 18 ಸಿಬ್ಬಂದಿಯನ್ನು ರಕ್ಷಿಸಲು ಸಾಧ್ಯವಾಗಿಲ್ಲ.

ಸಬ್ ಮೆರಿನ್‌ನಲ್ಲಿದ್ದ 18 ಮಂದಿ ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವ ಎ.ಕೆ.ಆಂಟನಿ ಅವರು ಖಚಿತಪಡಿಸಿದ್ದಾರೆ.

ಬೆಂಕಿ ಹೊತ್ತಿಕೊಳ್ಳುವ ಮುನ್ನ ಸಬ್ ಮೆರಿನ್‌ನಲ್ಲಿ ಸ್ಫೋಟ ಸಂಭವಿಸಿದ್ದು ಹೇಗೆ ಎಂಬುದರ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಆದರೆ ಸ್ವಾತಂತ್ರ್ಯ ದಿನಾಚರಣೆಗೆ ಒಂದು ದಿನದ ಮುನ್ನವೇ ಈ ಸ್ಫೋಟ ಸಂಭವಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.