ಈಗಿನ ಸುದ್ದಿ

ನಮ್ಮದು ನುಡಿದಂತೆ ನಡೆಯುವ ಸರ್ಕಾರ: ಸಿಎಂ

ನಮ್ಮದು ನುಡಿದಂತೆ ನಡೆಯುವ ಸರ್ಕಾರ: ಸಿಎಂ
Published On :

ಬೆಂಗಳೂರು: ನಮ್ಮದು ನುಡಿದಂತೆ ನಡೆಯುವ ಸರ್ಕಾರ. ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ 160 ಭರವಸೆಗಳಲ್ಲಿ 60 ಭರವಸೆಗಳನ್ನು ಈಡೇರಿಸಲು ಸರ್ಕಾರ ಈಗಾಗಲೇ ಕ್ರಮ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

67ನೇ ಸ್ವಾತಂತ್ರ್ಯೋತ್ಸವ ದಿನವಾದ ಇಂದು ನಗರದ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಸಿಎಂ, ಮೊದಲಿಗೆ ನಾಡಿನ ಜನತೆಗೆ 67ನೇ ಸ್ವಾತಂತ್ರೋತ್ಸವದ ಶುಭಾಯಶಯಗಳನ್ನು ಹೇಳಿದರು.

ಮುಖ್ಯಮಂತ್ರಿಯಾಗಿ ಇದು ನನಗೆ ಮೊದಲನೆ ಸ್ವಾತಂತ್ರ್ಯ ದಿನಾಚರಣೆ. ಇಂತಹ ಅವಕಾಶವನ್ನು ನೀಡಿದ ರಾಜ್ಯದ ಸಮಸ್ತ ಜನತೆಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ತಿಂಗಳು ಪೂರ್ಣಗೊಂಡಿದೆ. ನಮ್ಮ ಸರ್ಕಾರದ ಯೋಚನೆ, ಮುನ್ನೋಟಗಳ ಬಗ್ಗೆ ರಾಜ್ಯದ ಜನತೆಗೆ ಈಗಾಗಲೇ ಮನವರಿಕೆಯಾಗಿದೆ ಎಂದು ಭಾವಿಸುತ್ತೇನೆ ಎಂದರು.

ಸಂಪತ್ತು, ಅಧಿಕಾರಿ ಮತ್ತು ಅವಕಾಶ ಸಮಾಜದ ಎಲ್ಲ ವರ್ಗಗಳ ಜನರಿಗೂ ಸಮಾನ ರೀತಿಯಲ್ಲಿ ಹಂಚಿಕೆಯಾಗಬೇಕು ಎಂಬುದು ಪ್ರಜಾಪ್ರಭುತ್ವದ ಮೂಲ ಆಶಯ. ಇದರ ಈಡೇರಿಕೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಭರವಸೆ ನೀಡಿದರು.

ಜನ ಬದಲಾವಣೆಯನ್ನು ಬಯಸಿ ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ. ಬದಲಾವಣೆ ಎಂದರೆ ಕೇವಲ ಒಂದು ಪಕ್ಷದ ಆಡಳಿತ ಕೊನೆಗೊಂಡು ಮತ್ತೊಂದು ಪಕ್ಷ ಅಧಿಕಾರದ ಗದ್ದುಗೆ ಏರುವುದಲ್ಲ. ನಮ್ಮ ಯೋಜನೆ, ನೀತಿ, ನಿರ್ಧಾರಗಳೆಲ್ಲದರಲ್ಲೂ ಎಲ್ಲರ ಕಣ್ಣಿಗೆ ಕಾಣುವಂತಹ ಮತ್ತು ಜನ ಗುರುತಿಸುವಂತಹ ಬದಲಾವಣೆ ತರಬೇಕಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.