ಈಗಿನ ಸುದ್ದಿ

ಇಶ್ರತ್ ಜಹಾನ್ ಎನ್‌ಕೌಂಟರ್: ಸಿಬಿಐ ವಶಕ್ಕೆ ಪಾಂಡೆ

Published On :

ಅಹ್ಮದಾಬಾದ್: ಇಶ್ರತ್ ಜಹಾನ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಹಿರಿಯ ಐಪಿಎಸ್ ಅಧಿಕಾರಿ ಪಿಪಿ ಪಾಂಡೆ ಅವರನ್ನು ಆಗಸ್ಟ್ 21ರವರೆಗೆ ಸಿಬಿಐ ವಶಕ್ಕೆ ನೀಡಲಾಗಿದೆ.

ಇಶ್ರತ್ ಜಹಾನ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಈ ಹಿಂದೆ ಪಿಪಿ ಪಾಂಡೆ ಅವರನ್ನು 14ದಿನಗಳ ಕಾಲ ವಶಕ್ಕೆ ನೀಡಬೇಕು ಎಂದು ಮನವಿ ಮಾಡಿದ್ದರು. ಆದರೆ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಹೆಚ್.ಎಸ್ ಖುತ್ವಾದ್ ಅವರು ಪಾಂಡೆ ಅವರನ್ನು ಕೇವಲ ನಾಲ್ಕು ದಿನಗಳ ಕಾಲ ಮಾತ್ರ ಸಿಬಿಐ ವಶಕ್ಕೆ ನೀಡಿದ್ದಾರೆ.

ಅಲ್ಲದೆ ಪಾಂಡೆ ಅವರ ವಿಚಾರಣೆ ವೇಳೆ ಅವರ ವಕೀಲರ ಉಪಸ್ಥಿತಿಗೂ ನ್ಯಾಯಾಲಯ ಸಮ್ಮತಿ ಸೂಚಿಸಿದೆ. 2004ರ ಜೂನ್ 15ರಂದು ಅಹಮದಾಬಾದಿನ ಹೊರವಲಯದಲ್ಲಿ ಇಶ್ರತ್ ಜಹಾನ್ ಸೇರಿದಂತೆ ನಾಲ್ಕು ಮಂದಿಯನ್ನು ಪಿಪಿ ಪಾಂಡೆ ನೇತೃತ್ವದ ಪೊಲೀಸರ ತಂಡ ಉಗ್ರರೆಂದು ತಿಳಿದು ಎನ್‌ಕೌಂಟರ್‌ನಲ್ಲಿ ಕೊಂದು ಹಾಕಿದ್ದರು. ಆದರೆ ನಂತರ ಅಂದು ನಡೆದದ್ದು ನಕಲಿ ಎನ್‌ಕೌಂಟರ್ ಎಂಬುದರ ಕುರಿತು ಸಂಶಯ ವ್ಯಕ್ತವಾಗಿತ್ತು. ಪ್ರಸ್ತುತ ನ್ಯಾಯಾಲಯದ ಮೆಟ್ಟಿಲಿರುವ ಪ್ರಕರಣವನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.