ನಿರ್ಮಾಣ ಹಂತದ 5 ಅಂತಸ್ಥಿನ ಕಟ್ಟಡ ಕುಸಿತ: 3 ಸಾವು?
ಬೆಂಗಳೂರು: ಬೆಂಗಳೂರಿನ ಸೋಮೇಶ್ವರ ನಗರದಲ್ಲಿರುವ ನಿರ್ಮಾಣ ಹಂತದ ಐದು ಅಂತಸ್ಥಿನ ಬೃಹತ್ ಕಟ್ಟಡವೊಂದು ಸೋಮವಾರ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ದುರ್ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿರು ಶಂಕೆ ವ್ಯಕ್ತಪಡಿಸಲಾಗಿದೆ.
ಜಯನಗರದ 9ನೇ ಬ್ಲಾಕ್ನ ಸೋಮೇಶ್ವರ ನಗರದ ಯಲ್ಲಮ್ಮ ದೇವಾಲಯದ ಬಳಿ ಇದ್ದ ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಧಾವಿಸಿದ್ದು, 15 ಕಾರ್ಮಿಕರನ್ನು ರಕ್ಷಿಸಿದ್ದಾರೆ. ಈ ಪೈಕಿ ಇಬ್ಬರು ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಅವಶೇಷಗಳಡಿ ಓರ್ವ ಮಹಿಳೆ ಸೇರಿದಂತೆ ಮೂವರು ಸಿಲುಕಿರುವ ಸಾಧ್ಯತೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ.
ಈ ಕಟ್ಟಡ ಸಲೀಂ ಎಂಬುವವರಿಗೆ ಸೇರಿದ್ದು, ಕಳೆದ ಒಂದು ವರ್ಷದಿಂದ ಈ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು ಎನ್ನಲಾಗಿದೆ. ಕಳಪೆ ಗುಣಮಟ್ಟದ ಅಡಿಪಾಯ ಹಾಗೂ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಇರುವುದರಿಂದ ಕಟ್ಟಡದ ಅಡಿಪಾಯ ಕುಸಿಯಲು ಕಾರಣ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

