ಈಗಿನ ಸುದ್ದಿ

ಕಟ್ಟಡ ಕುಸಿತ: ಮತ್ತೆರಡು ಶವ ಪತ್ತೆ, ಮೃತರ ಸಂಖ್ಯೆ 4ಕ್ಕೆ ಏರಿಕೆ

ಕಟ್ಟಡ ಕುಸಿತ: ಮತ್ತೆರಡು ಶವ ಪತ್ತೆ, ಮೃತರ ಸಂಖ್ಯೆ 4ಕ್ಕೆ ಏರಿಕೆ
Published On :

ಬೆಂಗಳೂರು: ನಿನ್ನೆ ನಿಮಾನ್ಸ್ ಬಳಿಯ ಸೋಮೇಶ್ವರನಗರದಲ್ಲಿ ಕುಸಿದು ಬಿದ್ದ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡದ ಅವಶೇಷಗಳಡಿ ಮಂಗಳವಾರ ಮತ್ತೆರಡು ಶವಗಳು ಪತ್ತೆಯಾಗಿದ್ದು, ಮೃತರ ಸಂಖ್ಯೆ ನಾಲ್ಕಕ್ಕೆ ಏರಿದೆ.

ಇಂದು ಕಟ್ಟಡದ ಅವಶೇಷಗಳ ಅಡಿ ಸಿಲುಕಿದ್ದ ಓರ್ವ ಪುರುಷ ಹಾಗೂ ಓರ್ವ ಮಹಿಳೆಯ ಶವ ಪತ್ತೆಯಾಗಿದ್ದು, ಪುರುಷನನ್ನು ಬಿಹಾರದ ನಿರಂಜನ್ ಎಂದು ಹಾಗೂ ಮಹಿಳೆಯನ್ನು ರಾಯಚೂರಿನ ಮಾನ್ವಿ ತಾಲೂಕಿನ ನಾಗಮ್ಮ ಎಂದು ಗುರುತಿಸಲಾಗಿದೆ.

ದೇವಸ್ಥಾನಕ್ಕೆ ಸೇರಿದ ಕೆರೆ ಇದ್ದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸುತ್ತಿದ್ದ ಆರು ಅಂತಸ್ತಿನ ಅಪಾರ್ಟ್‌ಮೆಂಟ್ ನಿನ್ನೆ ಕುಸಿದು ಬಿದ್ದಿತ್ತು. ಈ ದುರ್ಘಟನೆಯಲ್ಲಿ ಈವರೆಗೆ ಒಟ್ಟು ನಾಲ್ವರು ಕಾರ್ಮಿಕರ ಶವ ಪತ್ತೆಯಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.