ಈಗಿನ ಸುದ್ದಿ

ರಾಜ್ಯಸಭಾ ಸದಸ್ಯರಾಗಿ ಬಿ.ಕೆ.ಹರಿಪ್ರಸಾದ್ ಅವಿರೋಧ ಆಯ್ಕೆ

ರಾಜ್ಯಸಭಾ ಸದಸ್ಯರಾಗಿ ಬಿ.ಕೆ.ಹರಿಪ್ರಸಾದ್ ಅವಿರೋಧ ಆಯ್ಕೆ
Published On :

ಬೆಂಗಳೂರು: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಅವರು ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಗಸ್ಟ್ 29ರಂದು ನಡೆಯಬೇಕಿದ್ದ ಚುನಾವಣೆಗೆ ಬಿ.ಕೆ.ಹರಿಪ್ರಸಾದ್ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಹರಿಪ್ರಸಾದ್ ಆಯ್ಕೆಯನ್ನು ಇಂದು ಅಧಿಕೃತವಾಗಿ ಪ್ರಕಟಿಸಿರುವ ಚುನಾವಣಾ ಅಧಿಕಾರಿಗಳು, ಈ ಕುರಿತು ಅವರಿಗೆ ಪ್ರಮಾಣ ಪತ್ರವನ್ನು ನೀಡಿದರು.

ಪ್ರಮಾಣಪತ್ರ ಸ್ವೀಕರಿಸಿದ ಬಳಿಕ ಮಾತನಾಡಿದ ಹರಿಪ್ರಸಾದ್, ರಾಜ್ಯದಲ್ಲಿ ಉತ್ತಮ ಕೆಲಸ ಮಾಡುವತ್ತ ಗಮನಹರಿಸುವುದಾಗಿ ಹೇಳಿದರು.

ಅನಿಲ್ ಲಾಡ್ ಅವರು ಶಾಸಕರಾಗಿ ಆಯ್ಕೆಯಾಗಿ ರಾಜ್ಯಸಭೆ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರಿಂದ ತೆರವಾದ ಈ ಸ್ಥಾನಕ್ಕೆ ಆಗಸ್ಟ್ 29ರಂದು ಚುನಾವಣೆ ನಿಗದಿಯಾಗಿತ್ತು. ಆದರೆ ರಾಜ್ಯಸಭೆಯ ಈ ಒಂದು ಸ್ಥಾನಕ್ಕಾಗಿ ಕಾಂಗ್ರೆಸ್‌ನಿಂದ ಹರಿಪ್ರಸಾದ್ ಮಾತ್ರ ಉಮೇದುವಾರಿಕೆ ಸಲ್ಲಿಸಿದ್ದರು. ಇತರೆ ರಾಜಕೀಯ ಪಕ್ಷಗಳು ಕಣದಿಂದ ದೂರ ಉಳಿದಿದ್ದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.