ಈಗಿನ ಸುದ್ದಿ

'ಕಲ್ಲಿದ್ದಲು ಕಡತ' ನಾಪತ್ತೆ: ಪ್ರಧಾನಿಯಿಂದ ಸ್ಪಷ್ಟನೆ; ಶುಕ್ಲಾ

'ಕಲ್ಲಿದ್ದಲು ಕಡತ' ನಾಪತ್ತೆ: ಪ್ರಧಾನಿಯಿಂದ ಸ್ಪಷ್ಟನೆ; ಶುಕ್ಲಾ
Published On :

ನವದೆಹಲಿ: ಕಡೆಗೂ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ, ಕಳೆದುಹೋದ ಕಲ್ಲಿದ್ದಲು ಹಗರಣದ ಕಡತಗಳ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಲು ಮುಂದಾಗಿದೆ. ಅಲ್ಲದೆ ಈ ಕುರಿತು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಹೇಳಿಕೆ ನೀಡಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವ ರಾಜೀವ್ ಶುಕ್ಲಾ ಅವರು ಗುರುವಾರ ಹೇಳಿದ್ದಾರೆ.

ಇಂದು ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಕಡತಗಳ ನಾಪತ್ತೆ ಕುರಿತು ಪ್ರಧಾನಿ ಸ್ಪಷ್ಟನೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಮತ್ತು ಎಐಎಡಿಎಂಕೆ ಪಟ್ಟು ಹಿಡಿದವು. ಇದಕ್ಕೆ ಉತ್ತರಿಸಿದ ಶುಕ್ಲಾ, ಅಗತ್ಯ ಬಿದ್ದರೆ ಪ್ರಕರಣದಲ್ಲಿ ಪ್ರಧಾನಿಯವರು ಮಧ್ಯಪ್ರವೇಶಿಸಿ, ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸದನಕ್ಕೆ ತಿಳಿಸಿದರು.

ಈ ಕುರಿತು ಈಗಾಗಲೇ ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಅರುಣ್ ಜೇಟ್ಲಿ ಸೇರಿದಂತೆ ಹಲವು ಸದಸ್ಯರ ಪ್ರಶ್ನೆಗೆ ಕಲ್ಲಿದ್ದಲು ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ಅವರು ಮಂಗಳವಾರ ಉತ್ತರ ನೀಡಿದ್ದಾರೆ. ಅದು ನಿಮಗೆ ತೃಪ್ತಿ ತರದಿದ್ದರೇ, ಆ ಬಗ್ಗೆ ಚರ್ಚೆಗೂ ನಾವು ಸಿದ್ಧ ಮತ್ತು ಅಗತ್ಯ ಬಿದ್ದರೆ ಪ್ರಧಾನಿಯವರು ಮಧ್ಯಪ್ರವೇಶಿಸಲಿದ್ದಾರೆ ಎಂದು ಶುಕ್ಲಾ ಹೇಳಿದರು.

ಜೈಸ್ವಾಲ್ ಅವರ ಹೇಳಿಕೆಯನ್ನು ನಾವು ಒಪ್ಪಿಕೊಳ್ಳುವುದಿಲ್ಲ. ಈ ಬಗ್ಗೆ ಪ್ರಧಾನಿಯವರೇ ಸ್ಪಷ್ಚನೆ ನೀಡುಬೇಕು ಎಂದು ಅರುಣ್ ಜೇಟ್ಲಿ ಅವರು ಒತ್ತಾಯಿಸಿದರು. ಲೋಕಸಭೆಯಲ್ಲಿ ಈ ಸಂಬಂಧ ಮಾತನಾಡಿದ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್, ಪ್ರಧಾನಿ ಮನಮೋಹನ್ ಸಿಂಗ್ ಅವರೇ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದರು. ಫೈಲ್‌ಗಳು ಕಳೆದುಹೋಗಲು ಕಾರಣವೇನು ಎಂಬ ಬಗ್ಗೆ ಅವರೇ ವಿವರಣೆ ನೀಡಬೇಕು ಎಂದು ಪಟ್ಟುಹಿಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.