ರುಪಾಯಿ ಮೌಲ್ಯ ಕುಸಿತಕ್ಕೆ ಆತಂಕ ಬೇಡ: ಚಿದು
ನವದೆಹಲಿ: ಡಾಲರ್ ಮುಂದೆ ರುಪಾಯಿ ಮೌಲ್ಯ ಕುಸಿತಕ್ಕೆ ಯಾವುದೇ ಆಂತಕ ಬೇಡ ಎಂದು ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಗುರುವಾರ ಹೇಳಿದ್ದಾರೆ.
ರುಪಾಯಿ ಮೌಲ್ಯ ಶೀಘ್ರದಲ್ಲೇ ಸುಧಾರಣೆಗೊಳ್ಳಲಿದೆ. ಇದರ ಬಗ್ಗೆ ಜನತೆಗೆ ಯಾವುದೇ ಆತಂಕ ಬೇಡ ಎಂದು ಚಿದಂಬರಂ ತಿಳಿಸಿದ್ದಾರೆ.
ಮಾರುಕಟ್ಟೆ ನಿಯಂತ್ರಣಕ್ಕೆ ಬರಲಿದ್ದು, ಡಾಲರ್ ಮುಂದೆ ರುಪಾಯಿ ಮೌಲ್ಯ ಹೆಚ್ಚಿಸುವುದಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಆದ್ದರಿಂದ ಇದರ ಬಗ್ಗೆ ಜನರಿಗೆ ಚಿಂತೆ ಬೇಡ. ರುಪಾಯಿ ಮೌಲ್ಯ ಶೀಘ್ರದಲ್ಲೇ ಸುಧಾರಿಸಲಿದೆ ಎಂದು ಚಿದು ಹೇಳಿದ್ದಾರೆ.
ದಿನದಿಂದ ದಿನಕ್ಕೆ ಡಾಲರ್ ಮುಂದೆ ರುಪಾಯಿ ಮೌಲ್ಯ ಕುಸಿತ ಕಂಡಿದೆ. ಇಂದು ಪ್ರತಿ ಡಾಲರ್ಗೆ 65.12 ರುಪಾಯಿಗೆ ಕುಸಿದಿದೆ. ಇದರಿಂದ ಅಮೆರಿಕ, ಯುರೋಪ್ ಮತ್ತು ಜಪಾನ್ ಮಾರುಕಟ್ಟೆಯ ಚೇತರಿಕೆಯಿಂದಾಗಿ ಹೂಡಿಕೆದಾರರು ಅತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಹೂಡಿಕೆದಾರರು ಭಾರತದಿಂದ ತಮ್ಮ ಹೂಡಿಕೆಯನ್ನು ಹಿಂತೆಗೆದುಕೊಂಡು ಅಮೆರಿಕ ಮತ್ತು ಜಪಾನ್ನಲ್ಲಿ ಹೂಡಿಕೆ ಮಾಡಲು ಮುಂದಾಗುತ್ತಿದ್ದಾರೆ. ಇದರಿಂದಾಗಿ ಡಾಲರ್ಗೆ ಬೇಡಿಕೆ ಹೆಚ್ಚಾಗುತ್ತಿದ್ದು ಆಂತಕವನ್ನುಂಟುಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

