ಈಗಿನ ಸುದ್ದಿ

ಲೋಕಸಭೆಯಲ್ಲಿ ಗದ್ದಲ: ಆಂಧ್ರದ 11 ಸಂಸದರ ಅಮಾನತು

ಲೋಕಸಭೆಯಲ್ಲಿ ಗದ್ದಲ: ಆಂಧ್ರದ 11 ಸಂಸದರ ಅಮಾನತು
Published On :

ನವದೆಹಲಿ: ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆಯನ್ನು ವಿರೋಧಿಸಿ ಆಂಧ್ರಪ್ರದೇಶದ ಸಂಸದರು ಗುರುವಾರ ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಅವರ ಮುಂದಿದ್ದ ಮೈಕ್ ಕಿತ್ತು ಸಂಸದರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಸಂಸದರ ವರ್ತನೆಯಿಂದ ತೀವ್ರ ಅಸಮಾಧಾನಗೊಂಡ ಸ್ಪೀಕರ್ ಮೀರಾ ಕುಮಾರ್ ಅವರು, ಪದೇಪದೇ ಕಲಾಪಕ್ಕೆ ಅಡ್ಡಿಪಡಿಸಿದ 11 ಸಂಸದರನ್ನು ಅಮಾನತುಗೊಳಿಸಿದ್ದಾರೆ.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದ ಆಂಧ್ರಪ್ರದೇಶದ ಕರಾವಳಿ ಹಾಗೂ ರಾಯಲ್‌ಸೀಮಾ ಪ್ರದೇಶದ ಸಂಸದರನ್ನು ಅಮಾನತುಗೊಳಿಸುವಂತೆ ಸಂಸದೀಯ ವ್ಯವಹಾರಗಳ ಸಚಿವ ಕಮಲ್ ನಾಥ್ ಅವರು ಗೊತ್ತುವಳಿ ಮಂಡಿಸಿದರು. ನಂತರ ಮುಂಗಾರು ಅಧಿವೇಶನ ಮುಗಿಯುವವರೆಗೆ ಕಾಂಗ್ರೆಸ್‌ನ 7 ಹಾಗೂ ಟಿಡಿಪಿಯ 4 ಸಂಸದರನ್ನು ಸ್ಪೀಕರ್ ಅಮಾನತು ಮಾಡಿದರು. ಆದರೆ ಸಂಸದರ ಅಮಾನತನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದೆ.

ಅಮಾನತು ಖಂಡಿಸಿದ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಅವರು, ಸಂಸದರ ವಿರುದ್ಧ ಸಚಿವರು ಮಂಡಿಸಿದ ಗೊತ್ತುವಳಿಯನ್ನು ನಾನು ವಿರೋಧಿಸುತ್ತೇನೆ. ತೆಲಗಾಂಣ ವಿಚಾರದಲ್ಲಿ ಕಾಂಗ್ರೆಸ್‌ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯವರ ಮನವೊಲಿಸಲು ಸಾಧ್ಯವಾಗುತ್ತಿಲ್ಲ. ಈಗ ತನ್ನದೇ ಪಕ್ಷದ ಸಂಸದರನ್ನು ಅಮಾನತುಗೊಳಿಸಿದೆ ಎಂದರು. ಅಲ್ಲದೇ ಸಂಸದರು ಶಾಂತಿಯುತ ಪ್ರತಿಭಟನೆ ಮಾಡಲಿ, ಗದ್ದಲವೆಬ್ಬಿಸೋದು ಸರಿಯಲ್ಲ ಎಂದು ಹೇಳಿದರು.

ಇದಕ್ಕು ಮುನ್ನ ಸಂಸತ್ತಿನ ಉಭಯ ಸದನಗಳಲ್ಲಿ ಕಳೆದುಹೋದ ಕಲ್ಲಿದ್ದಲು ಹಗರಣದ ಕಡತಗಳ ಸಂಬಂಧ ಪ್ರತಿಪಕ್ಷಗಳು ತೀವ್ರ ಕೋಲಾಹಲವೆಬ್ಬಿಸಿದವು. ನಾಪತ್ತೆಯಾದ ಕಡತಗಳ ಬಗ್ಗೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸ್ಪಷ್ಟನೆ ನೀಡಬೇಕು ಎಂದು ಸುಷ್ಮಾ ಸ್ವರಾಜ್ ಅಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.