ಈಗಿನ ಸುದ್ದಿ

ತುಂಡಾಗೆ ಪಶ್ಚಾತಾಪವಿಲ್ಲ: ಮೂಲಗಳು

Published On :

ನವದೆಹಲಿ: ಲಷ್ಕರ್-ಇ-ತೋಯ್ಬಾದ ಪ್ರಮುಖ ರುವಾರಿ ಸೈಯದ್ ಅಬ್ದುಲ್ ಕರೀಮ್ ಅಲಿಯಾಸ್ ತುಂಡಾಗೆ ತಾನು ಎಸಗಿರುವ ಕೃತ್ಯಗಳ ಬಗ್ಗೆ ಪಶ್ಚಾತಾಪವಿಲ್ಲ ಎಂದು ಮೂಲಗಳು ತಿಳಿಸಿವೆ.

ಭಯೋತ್ಪಾದನೆ ಚಟುವಟಿಕೆ ನಡೆಸುತ್ತಿದ್ದ ತುಂಡಾನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ ವೇಳೆ ಈ ಮಾಹಿತಿ ತಿಳಿದು ಬಂದಿದೆ. ನಾನು ಮಾಡಿರುವ ಕಾರ್ಯಗಳ ಬಗ್ಗೆ ನನಗೆ ಯಾವುದೇ ಪಶ್ಚಾತಾಪವಿಲ್ಲ ಎಂದು ತುಂಡಾ ಹೇಳಿದ್ದಾನೆ.

ದೇವರು ನನ್ನನ್ನು ಆಯ್ಕೆ ಮಾಡಿರುವುದು, ಆದ್ದರಿಂದ ನನಗೆ ಯಾವುದೇ ಪಶ್ಚಾತಾಪವಿಲ್ಲ ಎಂದು ಹೇಳುವುದರ ಮೂಲಕ ತನ್ನ ಕೃತ್ಯಗಳನ್ನು ಸಮರ್ಥಿಸಿಕೊಂಡಿದ್ದಾನೆ.

ತುಂಡಾ ಎಲ್ಲಾ ಧಾರ್ಮಿಕ ಗ್ರಂಥಗಳ ಬಗ್ಗೆ ಜ್ಞಾನವಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ. ಹಿಂದೂ ಧಾರ್ಮಿಕ ಗ್ರಂಥ, ಸಾಹಿತ್ಯ , ಇತರೆ ಧಾರ್ಮಿಕ ಹಾಗೂ ನೋಬಲ್ ಪ್ರಶಸ್ತಿ ಪುರಸ್ಕೃತ ಹಾಗೂ ನಾಟಕಕಾರ ಜಾರ್ಜ್ ಬೆರ್ನಾರ್ಡ್ ಶಾ ಅವರ ಪುಸ್ತಕಗಳನ್ನು ಗ್ರಹಿಸಿರುವುದು ಕಂಡು ಬಂದಿದೆ.

ಭೂಗತ ಪಾತಕಿ ದಾವುದ್ ಇಬ್ರಾಹಿಂನ ಬಲಗೈ ಬಂಟನಾಗಿದ್ದ ತುಂಡಾ, ಎಲ್‌ಇಟಿ ಸಂಘಟನೆಯಲ್ಲಿ ಬಾಂಬ್‌ಗಳನ್ನು ಸಿದ್ಧಪಡಿಸುವುದರಲ್ಲಿ ಪರಿಣಿತನಾಗಿದ್ದ. ಸುಮಾರು 40ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ತುಂಡಾ, ಪೊಲೀಸರಿಂದ ತಪ್ಪಿಸಿಕೊಳ್ಳಲು ಆಗ್ಗಿಂದಾಗ್ಗೆ ದೇಶದಿಂದ ದೇಶಕ್ಕೆ ಪಲಾಯನ ಮಾಡುತ್ತಿದ್ದನು. ತುಂಡಾ ಹೀಗೆ ಸುಮಾರು 19 ದೇಶಗಳಿಗೆ ಪಲಾಯನ ಮಾಡಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಲ್ಲದೆ 2001ರ ಸಂಸತ್ ಮೇಲಿನ ದಾಳಿ, 1996-98ರಲ್ಲಿ ಇಂಡೋ ನೇಪಾಳ ಗಡಿಯಲ್ಲಿ ನಡೆದ ಸರಣಿ ಸ್ಫೋಟ, 26/11 ಮುಂಬೈ ದಾಳಿ ಪ್ರಕರಣದ ಪ್ರಮುಖ ರುವಾರಿ ಜಮಾತ್ ಉದ್ ದವಾ ಮುಖ್ಯಸ್ಥ ಹಫೀಜ್ ಮಹಮದ್ ಸೈಯ್ಯದ್‌ನೊಂದಿಗೂ ಈತನಿಗೆ ನಂಟಿತ್ತು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.