ಪ್ರಧಾನಿ ಸ್ಥಾನಕ್ಕೆ ಮೋದಿ, ರಾಹುಲ್ ಅರ್ಹರಲ್ಲ: ಅಣ್ಣಾ ಹಜಾರೆ
ಅಮೆರಿಕ: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯಾಗಲಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯಾಗಲಿ ಪ್ರಧಾನಿ ಸ್ಥಾನಕ್ಕೆ ಅರ್ಹರಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಶುಕ್ರವಾರ ಹೇಳಿದ್ದಾರೆ.
ಎರಡು ವಾರಗಳ ಅಮೆರಿಕ ಪ್ರವಾಸ ಕೈಗೊಂಡಿರುವ ಭಷ್ಟಚಾರ ವಿರೋಧಿ ಅಣ್ಣಾ ಹಜಾರೆ ಅವರು, ಪಕ್ಷ ಆಯ್ಕೆ ಮಾಡುವಂತಹ ಪ್ರಧಾನಿ ಅಭ್ಯರ್ಥಿಗಳನ್ನು ದೂರವಿಟ್ಟು, ಪ್ರಧಾನಿ ಸ್ಥಾನಕ್ಕೆ ನೇರ ಚುನಾವಣೆ ನಡೆಸಬೇಕಾಗಿದೆ. ಏಕೆಂದರೆ ಭಾರತದಲ್ಲಿರುವ ರಾಜಕೀಯ ಪಕ್ಷಗಳು ಪ್ರಧಾನಿ ಅಭ್ಯರ್ಥಿಗಳು ಎಂದು ಸೂಚಿಸುತ್ತಿರುವ ಮೋದಿ ಮತ್ತು ರಾಹುಲ್ ಆ ಸ್ಥಾನಕ್ಕೆ ಅರ್ಹರಲ್ಲ ಎಂದು ತಿಳಿಸಿದ್ದಾರೆ.
ಮೆರಿಲ್ಯಾಂಡ್‌ನಲ್ಲಿರುವ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳು ಕೈಗೊಂಡಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಬಲ ಎಂದೆನಿಸಿಕೊಂಡಿರುವ ಎರಡು ರಾಜಕೀಯ ಪಕ್ಷಗಳನ್ನು ಮೋದಿ ಮತ್ತು ರಾಹುಲ್ ಪ್ರತಿನಿಧಿಸುತ್ತಿದ್ದಾರೆ. ಇಂತಹವರನ್ನು ನಾವು ಪ್ರಧಾನಿಯಾಗಿ ಕಾಣಲು ಇಚ್ಚಿಸುವುದಿಲ್ಲ ಎಂದು ಹೇಳಿದ್ದಾರೆ.
ನಮಗೆ ಭಾರತೀಯ ಸಂವಿಧಾನದಲ್ಲಿ ನಂಬಿಕೆಯಿದೆ. ಇಂತಹ ರಾಜಕೀಯ ಪಕ್ಷಗಳು ಸಂವಿಧಾನ ವಿರೋಧವಾಗಿ ಕೆಲಸ ಮಾಡುತ್ತಿವೆ. ಇದರ ಬಗ್ಗೆ ಭಾರತೀಯ ಜನತೆಯಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಅಣ್ಣಾ ತಿಳಿಸಿದ್ದಾರೆ.
ದೇಶಕ್ಕೆ ಪ್ರಧಾನಿ ಅಥವಾ ರಾಷ್ಟ್ರಪತಿ ಬೇಕಾದರೆ, ಇಡಿ ದೇಶದ ಜನತೆಯೇ ಮತ ಚಲಾಯಿಸಿ ಅವರನ್ನು ಆಯ್ಕೆ ಮಾಡಬೇಕು. ಪಕ್ಷ ಆಯ್ಕೆ ಮಾಡುವ ಅಭ್ಯರ್ಥಿ ನಮಗೆ ಬೇಕಿಲ್ಲ. ದೇಶದ ಜನತೆಯೇ ಆಯ್ಕೆ ಮಾಡಿದರೆ ನಮಗೆ ಒಳ್ಳೆ ಪ್ರಧಾನಿ ಸಿಗಲಿದ್ದಾರೆ ಎಂದು ಹಜಾರೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

