ಈಗಿನ ಸುದ್ದಿ

ಫೋಟೋ ಜರ್ನಲಿಸ್ಟ್ ಮೇಲೆ ಗ್ಯಾಂಗ್‌ರೇಪ್, ಆರೋಪಿಗಳ ಬಂಧನ

ಫೋಟೋ ಜರ್ನಲಿಸ್ಟ್ ಮೇಲೆ ಗ್ಯಾಂಗ್‌ರೇಪ್, ಆರೋಪಿಗಳ ಬಂಧನ
Published On :

ಮುಂಬೈ: ಮುಂಬೈನಲ್ಲಿ ಪತ್ರಿಕಾ ಫೋಟೋಗ್ರಾಫರ್ ಮೇಲೆ ಗುರುವಾರ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಐವರು ಶಂಕಿತ ಆರೋಪಿಗಳನ್ನು ಬಂಧಿಸುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ.

ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮುಂಬೈ ಪೊಲೀಸರು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕಾಮುಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಬೆಳಗ್ಗೆಯಷ್ಟೇ ಯುವತಿ ನೀಡಿದ ಮಾಹಿತಿಯ ಮೇರೆಗೆ ಐವರು ಶಂಕಿತ ಅತ್ಯಾಚಾರಿಗಳ ರೇಖಾ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದರು. ಅಲ್ಲದೆ ಆರೋಪಿಗಳ ಪತ್ತೆಗಾಗಿ 18 ಪೊಲೀಸ್ ತಂಡಗಳನ್ನು ರಚಿಸಿದ್ದರು. ಈ ಸಂಬಂಧ ಈವರೆಗೆ ಪೊಲೀಸರು 20ರಿಂದ 25 ಯುವಕರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೂ ಒಳಪಡಿಸಿದ್ದರು.

ಇನ್ನು ಈ ಘಟನೆಯನ್ನು ಇಂದು ಲೋಕಸಭೆಯಲ್ಲಿ ಸ್ಪೀಕರ್ ಮೀರಾ ಕುಮಾರ್ ಅವರು ತೀವ್ರವಾಗಿ ಖಂಡಿಸಿದ್ದಾರೆ.

ನಿಯತಕಾಲಿಕೆಯೊಂದರ ಫೋಟೋಗ್ರಾಫರ್ ಆಗಿರುವ 22 ವರ್ಷದ ಯುವತಿ ನಿನ್ನೆ ಸಂಜೆ ತನ್ನ ಸಹೋದ್ಯೋಗಿಯೊಂದಿಗೆ ವರದಿಗಾರಿಕೆಗೆ ತೆರಳಿದ್ದಾಗ ಈ ಘಟನೆ ನಡೆದಿದ್ದು, ಮುಂಬೈ ಲೋಯಲ್ ಪ್ಯಾರೆಲ್ ಪ್ರದೇಶದ ಶಕ್ತಿ ಮಿಲ್‌ನಲ್ಲಿ ಯುವತಿಯೊಂದಿಗಿದ್ದ ಸಹೋದ್ಯೋಗಿಯನ್ನು ಕಟ್ಟಿಹಾಕಿ, ಯುವತಿಯ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದರು.

ಯುವತಿಯ ಸ್ನೇಹಿತರು ಮತ್ತು ಕುಟುಂಬದವರು ಎನ್.ಎಂ ಜೋಶಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಸ್ ಲೋಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿ ತೀವ್ರ ರಕ್ತಸ್ರಾವದಿಂದ ನಿತ್ರಾಣಗೊಂಡಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ, ಯುವತಿಯ ಆರೋಗ್ಯ ವಿಚಾರಿಸಿದ ಮಹಾರಾಷ್ಟ್ರ ಗೃಹ ಸಚಿವ ಆರ್.ಆರ್. ಪಾಟೀಲ್ ಅವರು, ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.