ಈಗಿನ ಸುದ್ದಿ

ನಾಳೆಯಿಂದ ಜಗನ್ ಅಮರಣಾಂತ ಉಪವಾಸ

Published On :

ಆಂಧ್ರಪ್ರದೇಶ: ವೈಎಸ್ಸಾರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ.ಎಸ್. ಜಗನ್‌ಮೋಹನ್ ರೆಡ್ಡಿ ಭಾನುವಾರದಿಂದ ಅಮರಣಾಂತ ಉಪವಾಸ ಕೈಗೊಳ್ಳಲಿದ್ದಾರೆ. ಮೇ 2012ರಿಂದ ಚಂಚಲಗುಡ ಜೈಲಿನಲ್ಲಿರುವ ಜಗನ್ ಭಾನುವಾರ ಬೆಳಗ್ಗೆ ಜೈಲಿನೊಳಗೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.

ಗುಂಟೂರಿನಲ್ಲಿ 6 ದಿನಗಳ ಕಾಲ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಿ ಆಸ್ಪತ್ರೆಗೆ ದಾಖಲಾಗಿರುವ ಪಕ್ಷದ ಗೌರವಾಧ್ಯಕ್ಷೆ ವೈ. ಎಸ್. ವಿಜಯಮ್ಮ ಅವರಿಗೆ ಫೋನಾಯಿಸಿದ ಕಡಪ ಸಂಸದ ಜಗನ್ ಉಪವಾಸ ಕೈ ಬಿಡುವಂತೆ ಒತ್ತಾಯಿಸಿದ್ದಾರೆ.

ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿಜಯಮ್ಮ ಅವರನ್ನು ಪೊಲೀಸರು ಬಲವಂತವಾಗಿ ಕರೆದೊಯ್ದು ಗುಂಟೂರಿನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು ಎಂದು ಹೇಳಲಾಗುತ್ತಿದೆ. ಅಲ್ಲಿ ವಿಜಯಮ್ಮ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೈ ಬಿಟ್ಟಿದ್ದು, ಇಂದು ಸಂಜೆ ಅವರು ಹೈದ್ರಾಬಾದ್‌ಗೆ ಮರಳುವ ಸಾಧ್ಯತೆಯಿದೆ.

ಅಖಂಡ ಆಂಧ್ರಪ್ರದೇಶಕ್ಕಾಗಿ ವೈಎಸ್ಸಾರ್ ಕಾಂಗ್ರೆಸ್ ಪಕ್ಷ ಹೋರಾಡುತ್ತಿದ್ದು, ಕೇಂದ್ರ ಸರ್ಕಾರ ತಮಗೆ ನ್ಯಾಯವನ್ನೊದಗಿಸಬೇಕೆಂದು ಪಕ್ಷ ಒತ್ತಾಯಿಸಿದೆ.

ಇದೇ ಉದ್ದೇಶದಿಂದ ಜಗನ್ ಭಾನುವಾರದಿಂದ ಅಮರಣಾಂತ ಉಪವಾಸ ಕೈಗೊಳ್ಳಲಿದ್ದಾರೆ. ಉಪವಾಸ ಸತ್ಯಾಗ್ರಹ ಕೈಗೊಳ್ಳುವ ಮುನ್ನ ಜಗನ್‌ರ ಪತ್ನಿ ವೈ.ಎಸ್. ಭಾರತಿ, ಹಿರಿಯ ನೇತಾರರಾದ ಕೋನತಲ ರಾಮಕೃಷ್ಣ, ಭೂಮನಾಗಿ ರೆಡ್ಡಿ, ಧರ್ಮನ ಕೃಷ್ಣದಾಸ್ ಮೊದಲಾದವರು ಜಗನ್‌ರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಬಲ್ಲಮೂಲಗಳ ಪ್ರಕಾರ ಜಗನ್, ಅಮರಣಾಂತ ಉಪವಾಸ ಕೈಗೊಳ್ಳುವುದರ ಹಿಂದಿನ ಉದ್ದೇಶವನ್ನು ತೆರೆದ ಪತ್ರದ ಮೂಲಕ ಜನರಿಗೆ ತಿಳಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.