ಲೋಕಸಭೆ ಉಪ ಚುನಾವಣೆ: 2 ಸ್ಥಾನಗಳಲ್ಲೂ 'ಕೈ'ಗೆಲುವು

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ಪ್ರತಿಷ್ಠೆಯಾಗಿದ್ದ ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭೆ ಉಪ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಆರಂಭದಿಂದಲೂ ಸತತ ಮುನ್ನಡೆ ಕಾಯ್ದುಕೊಂಡು ಬಂದ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಅವರು ಭಾರಿ ಅಂತರದಿಂದ ಗೆಲವು ಸಾಧಿಸಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಜೆಡಿಎಸ್‌ನ ಅನಿತಾ ಕುಮಾರಸ್ವಾಮಿ ಅವರ ವಿರುದ್ಧ ಸುಮಾರು 1, 36,996 ಮತಗಳ ಅಂತರದಿಂದ ಸುರೇಶ್ ಜಯ ಗಳಿಸಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನಟಿ ರಮ್ಯಾ ಅವರು ಸಹ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಜೆಡಿಎಸ್‌ನ ಸಿ.ಎಸ್ ಪುಟ್ಟರಾಜು ವಿರುದ್ಧ ರಮ್ಯ 67,611 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ರಮ್ಯ ಅವರು ಒಟ್ಟು 4,84,085 ಮತ ಪಡೆದರೇ, ಜೆಡಿಎಸ್‌ನ ಪುಟ್ಟರಾಜು ಅವರು 4,16,474 ಮತಗಳನ್ನು ಪಡೆದುಕೊಂಡಿದ್ದಾರೆ.
ಇನ್ನು ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ರಮ್ಯ, ನನ್ನ ಗೆಲವು ಮಂಡ್ಯ ಜನತೆಯದ್ದು, ಪ್ರಚಾರದ ವೇಳೆ ತಂದೆಯನ್ನು ಕಳೆದುಕೊಂಡ ನನಗೆ ಮಂಡ್ಯ ಜನತೆ ಸ್ಫೂರ್ತಿ ನೀಡಿದ್ದರು. ನನ್ನ ತಂದೆ, ತಾಯಿ, ಜಾತಿ ಬಗ್ಗೆ ಪ್ರಶ್ನಿಸಿದ್ದವರಿಗೆ ಮಂಡ್ಯ ಜನತೆಯೇ ಉತ್ತರ ನೀಡಿದ್ದಾರೆ. ರಾಜಕೀಯಕ್ಕೆ ಬರುವುದು ನನ್ನ ತಂದೆಯ ಆಸೆಯಾಗಿತ್ತು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


