ಈಗಿನ ಸುದ್ದಿ

ಜೆಡಿಎಸ್ ರಾಜ್ಯಾಧ್ಯಕ್ಷ, ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜಿನಾಮೆ: ಎಚ್‌ಡಿಕೆ

ಜೆಡಿಎಸ್ ರಾಜ್ಯಾಧ್ಯಕ್ಷ, ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜಿನಾಮೆ: ಎಚ್‌ಡಿಕೆ
Published On :

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭೆ ಉಪ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಾಗೂ ಪ್ರತಿಪಕ್ಷದ ನಾಯಕನ ಸ್ಥಾನಕ್ಕೂ ರಾಜಿನಾಮೆ ನೀಡುವುದಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಹೇಳಿದ್ದಾರೆ.

ಉಪ ಚುನಾವಣೆಯ ಫಲಿತಾಂಶದ ನಂತರ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಮೊದಲು ಜೆಡಿಎಸ್‌ಗೆ ಮತ ಹಾಕಿದ ಮತದಾರನಿಗೆ ಕೃತಜ್ಞತೆ ಸಲ್ಲಿಸಿದರು.

ಈ ಚುನಾವಣೆಯಲ್ಲಿ ಜನರ ಮನಸನ್ನು ಗೆಲ್ಲುವಲ್ಲಿ ನಾವು ವಿಫಲವಾಗಿದ್ದೇವೆ. ಹೀಗಾಗಿ ನಾನು ನೈತಿಕ ಹೊಣೆ ಹೊರಬೇಕಾದ ಅಗತ್ಯ ಇದ್ದು, ಶೀಘ್ರದಲ್ಲೇ ಶಾಸಕರ ಸಭೆ ಕರೆದು ತಮ್ಮ ರಾಜಿನಾಮೆ ನಿರ್ಧಾರವನ್ನು ಪ್ರಕಟಿಸುವುದಾಗಿ ಕುಮಾರಸ್ವಾಮಿ ತಿಳಿಸಿದರು.

ಪಕ್ಷದ ರಾಜ್ಯಧ್ಯಕ್ಷ ಸ್ಥಾನ ಹಾಗೂ ಪ್ರತಿಪಕ್ಷದ ನಾಯಕ ಸ್ಥಾನ ತ್ಯಜಿಸಲು ತಾವು ನಿರ್ಧರಿಸಿದ್ದು, ಈ ಎರಡೂ ಸ್ಥಾನಕ್ಕು ನನಗಿಂತ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವಂತೆ ಜೆಡಿಎಸ್ ರಾಷ್ಟ್ರಾಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.