ಆಂಧ್ರ ವಿಭಜನೆ: ಜೈಲಲ್ಲೇ ಜಗನ್ ಆಮರಣಾಂತ ಉಪವಾಸ

ಹೈದರಾಬಾದ್: ಆಂಧ್ರ ವಿಭಜನೆಯನ್ನು ಖಂಡಿಸಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ವೈಎಸ್ ಜಗನ್ಮೋಹನ್ ರೆಡ್ಡಿ ಅವರು ಭಾನುವಾರದಿಂದ ಆಮರಣಾಂತ ಉಪವಾಸವನ್ನು ಕೈಗೊಂಡಿದ್ದಾರೆ.
ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆಯನ್ನು ವಿರೋಧಿಸಿ ಆಂಧ್ರ ಪ್ರದೇಶ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ನಿರಂತರವಾಗಿ ಸಾಗಿದ್ದು, ಇಂದು ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿ ವೈಎಸ್ಆರ್ ಕಾಂಗ್ರೆಸ್ ಸಂಸ್ಥಾಪಕ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಆಮರಣಾಂತ ಉಪವಾಸ ಕೈಗೊಂಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆ ಎದುರಿಸುತ್ತಿರುವ ಜಗನ್, ಪ್ರಸ್ತುತ ಹೈದರಾಬಾದಿನ ಚಂಚಲಗೂಡ ಜೈಲಿನಲ್ಲಿದ್ದಾರೆ. ಇಂದು ಬೆಳಗ್ಗಿನಿಂದಲೇ ಜಗನ್ ಉಪವಾಸ ಕೈಗೊಂಡಿದ್ದು, ತಮಗೆ ನೀಡಿದ್ದ ಟೀ, ಉಪಾಹಾರ ಮತ್ತು ಮಧ್ಯಾಹ್ನದ ಊಟವನ್ನು ನಿರಾಕರಿಸಿದ್ದಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ.
ಆದರೆ ಜಗನ್ ಕೈಗೊಂಡಿರುವ ಈ ಉಪವಾಸ ಸತ್ಯಾಗ್ರಹಕ್ಕೆ ಜೈಲಿನ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದು, ಪೊಲೀಸರ ಕ್ರಮವನ್ನು ಧಿಕ್ಕರಿಸಿ ಜಗನ್ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಅಂತೆಯೇ ಜಗನ್ ಸೇರಿದಂತೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಹ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದು, ಪಕ್ಷದ ಮುಖಂಡರು ತಮ್ಮ ಮುಖಂಡ ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದನ್ನು ಸ್ಪಷ್ಟಪಡಿಸಿದ್ದಾರೆ.
ಈ ಆಂಧ್ರ ಪ್ರದೇಶ ವಿಭಜನೆಯನ್ನು ಖಂಡಿಸಿದ್ದ ಕಡಪ ಸಂಸದರಾಗಿರುವ ಜಗನ್ ಅವರು ತಮ್ಮ ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅಲ್ಲದೆ ಅವರ ತಾಯಿ ಮತ್ತು ಪುಲಿವೆಂದುಲ ಕ್ಷೇತ್ರದ ಶಾಸಕಿ ವಿಜಯಲಕ್ಷ್ಮಿ ಅವರು ಕೂಡ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


